ರಾಮನಾಥಪುರ, ಮಾ.16: ಕಾವೇರಿ ನದಿ ದಂಡೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಂಡು, ಅದರ ಬಳಿಕ ಕಾವೇರಿ ನದಿ ಸ್ವಚ್ಛತಾ ಅಂದೋಲನ ಸಮಿತಿ ಜಿಲ್ಲಾಧ್ಯಕ್ಷರು, ಹಾಸನ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷರು, ವಿಶ್ವ ವೀರಶೈವ ಲಿಂಗಾಯಿತ ಮಹಾ ವೇದಿಕೆ ರಾಜ್ಯಾಧ್ಯಕ್ಷರು, ರಾಜ್ಯ ಪ್ರಶಸ್ತಿ ವಿಜೇತರು ಹಾಗೂ ಹಿರಿಯ ಪತ್ರಕರ್ತರಾದ ಶರಣ ಎಂ.ಎನ್. ಕುಮಾರಸ್ವಾಮಿ ಅವರ 67ನೇ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾವೇರಿ ನದಿ ಸ್ವಚ್ಛತಾ ಅಂದೋಲನ ಸಮಿತಿ ಹಾಗೂ ಶರಣ ಸಾಹಿತ್ಯ ಪರಿಷತ್ತಿನ ವತಿಯಿಂದ ನಡೆದ ಈ ಕಾರ್ಯಕ್ರಮದಲ್ಲಿ ಮೊದಲು ಕಾವೇರಿ ನದಿ ದಂಡೆಯಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು. ನಂತರ ಶರಣ ಎಂ.ಎನ್. ಕುಮಾರಸ್ವಾಮಿ ಅವರಿಗೆ ಗೌರವ ಸಮರ್ಪಿಸಿ ಜನ್ಮದಿನದ ಶುಭಾಶಯಗಳನ್ನು ಕೋರಲಾಯಿತು.

ಈ ಸಂದರ್ಭದಲ್ಲಿ ಕಾವೇರಿ ನದಿ ಸ್ವಚ್ಛತಾ ಸಮಿತಿ ಪ್ರಧಾನ ಕಾರ್ಯದರ್ಶಿ ಕಾಳಬೋಯಿ, ಖಜಾಂಚಿ ರಘು, ಸಂಘಟನಾ ಕಾರ್ಯದರ್ಶಿ ಪಿ.ಎನ್.ಟಿ. ಶಿವಪ್ಪ, ತಾಲ್ಲೂಕು ಅಧ್ಯಕ್ಷ ಸಿದ್ದರಾಜು, ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಅರ್.ಕೆ. ಶ್ರೀನಿವಾಸ್, ಐ.ಬಿ. ಕುಮಾರ್ ಸೇರಿದಂತೆ ಹಲವರು ಭಾಗವಹಿಸಿ ಶುಭಾಶಯ ಕೋರಿದರು.
ಕಾರ್ಯಕ್ರಮದಲ್ಲಿ ಕಾವೇರಿ ನದಿಯ ಸಂರಕ್ಷಣೆ, ಸ್ವಚ್ಛತೆ ಮತ್ತು ಪರಿಸರ ಜಾಗೃತಿ ಕುರಿತು ಸಂದೇಶ ನೀಡಲಾಗಿದ್ದು, ಸಾಮಾಜಿಕ ಹೊಣೆಗಾರಿಕೆಯಿಂದ ನದಿ ಸ್ವಚ್ಛತೆಗಾಗಿ ಎಲ್ಲರೂ ಕೈಜೋಡಿಸಬೇಕೆಂದು ಕರೆ ನೀಡಲಾಯಿತು.
– ಕುಮಾರಸ್ವಾಮಿ
