ಹಾಸನ, ಏ.25: ನಗರದ ಮಲೆನಾಡು ಇಂಜಿನಿಯರಿಂಗ್ ಕಾಲೇಜಿನ ದಿ ಲಿಟರರಿ ಕ್ಲಬ್ ವತಿಯಿಂದ ಆಯೋಜಿಸಲಾಗುತ್ತಿರುವ ‘ಮಲ್ನಾಡ್ 2K26’ ಅಂತರ್ಬ್ರಾಂಚ್ ಮಹೋತ್ಸವದ ಅಂಗವಾಗಿ ಲೋಗೋ ಬಿಡುಗಡೆ ಕಾರ್ಯಕ್ರಮ ಶನಿವಾರ ನಡೆಯಿತು.

ಮೇ 8ರಿಂದ 10ರವರೆಗೆ ಮೂರು ದಿನಗಳ ಕಾಲ ನಡೆಯಲಿರುವ ಈ ಮಹೋತ್ಸವದಲ್ಲಿ ಸುಮಾರು 35ಕ್ಕೂ ಹೆಚ್ಚು ರೋಚಕ ಉಪ ಕಾರ್ಯಕ್ರಮಗಳು ಮತ್ತು ವಿವಿಧ ಸ್ಪರ್ಧಾತ್ಮಕ ಇವೆಂಟ್ಗಳನ್ನು ಆಯೋಜಿಸಲಾಗಿದೆ. ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವವನ್ನು ಉತ್ತೇಜಿಸುವ ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಲೋಗೋವನ್ನು ಹಾಸನ ಮಲೆನಾಡು ತಾಂತ್ರಿಕ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಚೌಡುವಳ್ಳಿ ಜಗದೀಶ್ ಬಿಡುಗಡೆಗೊಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಹೆಚ್.ಜೆ. ಅಮರೇಂದ್ರ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ. ಇಂದ್ರ ಬಹುದ್ದೂರ್, ಸಹಾಧಿಕಾರಿ ಡಾ. ಶಿವಶಂಕರ್, ಕಾರ್ಯಕ್ರಮ ಸಂಯೋಜಕರಾದ ಡಾ. ಶರತ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸಹಪ್ರಾಧ್ಯಾಪಕರಾದ ಕೆ.ಎಸ್. ಪ್ರಸನ್ನಕುಮಾರ್, ಕಟ್ಟಾಯ ಶಿವಕುಮಾರ್, ಆರ್. ರಘುಪ್ರಸಾದ್ ಹಾಗೂ ಲಿಟರರಿ ಕ್ಲಬ್ ಪದಾಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರು.
ಮಹೋತ್ಸವದ ಅಂಗವಾಗಿ ವಿವಿಧ ಸ್ಪರ್ಧೆಗಳು ನಡೆಯಲಿದ್ದು, ಸರ್ವೋತ್ತಮ ಪ್ರಶಸ್ತಿಗಾಗಿ ವಿದ್ಯಾರ್ಥಿಗಳು ಪೈಪೋಟಿ ನಡೆಸಲಿದ್ದಾರೆ.
– ಶಿವಕುಮಾರ್ ಕಟ್ಟಾಯ.
