ನೀರಿನ ಬಾಟಲಿ ಮಾರುವ ಮಳಿಗೆಗಳು ಕಡ್ಡಾಯವಾಗಿ ಖಾಲಿ ಬಾಟಲಿಗೆ ಕನಿಷ್ಠ ಬೆಲೆ ನೀಡಿ ಮರುಖರೀದಿಸುವಂತೆ ನಿಯಮ ರೂಪಿಸಲು ಸೂಚನೆ ನೀಡಲಾಗಿದೆ ಎಂದು ಸಚಿವ ಈಶ್ವರ ಬಿ.ಖಂಡ್ರೆ ಹೇಳಿದ್ದಾರೆ.
ಪ್ಲಾಸ್ಟಿಕ್ ತ್ಯಾಜ್ಯ ನಿಯಂತ್ರಣ ಮತ್ತು ಪರಿಸರ ಸಂರಕ್ಷಣೆಗಾಗಿ ಕಾರ್ಯರೂಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ರಾಜ್ಯ ಕಾರ್ಯಸರ್ಶಿಗೆ ಪತ್ರ ಬರೆದಿರುವ ಸಚಿವರು, ನೀರು ಮಾರಾಟ ಮಾಡುವ ಕಂಪನಿಗಳಿಗೆ ಖಾಲಿ ಬಾಟಲಿಗಳನ್ನು ಹಿಂಪಡೆದು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಜವಾಬ್ದಾರಿಯನ್ನು ನೀಡುವಂತೆ ಈ ನಿಯಮವನ್ನು ರೂಪಿಸಲಾಗುತ್ತದೆ. ಉತ್ಪಾದಕರ ವಿಸ್ತರಿತ ಜವಾಬ್ದಾರಿ (EPR) ಅಡಿಯಲ್ಲಿ ಕಂಪನಿಗಳು ತಮ್ಮ ಉತ್ಪನ್ನಗಳಿಂದ ಪರಿಸರಕ್ಕೆ ಆಗುವ ಪರಿಣಾಮಗಳನ್ನು ನಿರ್ವಹಿಸಬೇಕಾಗಿದೆ ಎಂದಿದ್ದಾರೆ.

ಈ ಕ್ರಮವು ಕಟ್ಟುನಿಟ್ಟಾಗಿ ಜಾರಿಗೆ ಬಂದರೆ, ರಸ್ತೆ, ನದಿ, ಕೆರೆ, ಅರಣ್ಯ ಪ್ರದೇಶಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ತಡೆಯಲು ಸಾಧ್ಯವಾಗುತ್ತದೆ ಎಂದರೆ ತಪ್ಪಿಲ್ಲಾ.
