
ಮಂಡ್ಯ- ಸೇವಾ ಸಿಂಧು ಯೋಜನ ಅಡಿಯಲ್ಲಿ ರೂಪಿಸಲಾದ “ಗ್ರಾಮ ಒನ್” ಯೊಜನೆಯ ಅಡಿಯಲ್ಲಿ ನಾಗರೀಕ ಸೇವೆಗಳನ್ನು ಪಡೆಯಲು ಅರ್ಜಿಗಳನ್ನು ಸ್ವೀಕರಿಸಲಾಗುತಿದ್ದು ಶ್ರೀರಂಗಪಟ್ಟಣ ತಾಲ್ಲೂಕು, ಕೆ.ಶೆಟ್ಟಿಹಳ್ಳಿ, ಪಂಚಾಯಿತಿಯಲ್ಲಿ ಖಾಲಿ ಇರುವ ಗ್ರಾಮ ಪಂಚಾಯಿತಿಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಅಹ್ವಾನಿಲಾಗಿದ್ದು ಮಾರ್ಚ್ 15 ರೊಳಗೆ ಅರ್ಜಿ ಸಲ್ಲಿಸಬೇಕಾಗಿರುತ್ತದೆ.
ಸರ್ಕಾರದ ಸೇವೆಗಳನ್ನು ಮನೆಬಾಗಿಲಿಗೆ ತಲುಪಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದ್ದು, ಸರ್ಕಾರವು ಈಗಾಗಲೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿನ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ‘ಗ್ರಾಮ ಒನ್” ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಲುವಾಗಿ ಅರ್ಜಿಯನ್ನು ಅಹ್ವಾನಿಸಿದೆ.
ಆಸಕ್ತಿಯುಳ್ಳ ಅಭ್ಯರ್ಥಿಗಳು https://kal-mys.gramaone.