ಕೆ.ಆರ್.ಪೇಟೆ: ತಾಲೂಕು ಮಡುವಿನಕೋಡಿ ಗ್ರಾಮದ ಜೆಡಿಎಸ್ ಮುಖಂಡರು ಹಾಗೂ ಉದ್ಯಮಿಗಳಾದ ಎಂ.ಆರ್.ಮನು ಅವರನ್ನು ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಶಾಸಕ ಹೆಚ್.ಟಿ.ಮಂಜು ಅವರು ತಿಳಿಸಿದರು.

ಮಡುವಿನಕೋಡಿ ಗ್ರಾಮದಲ್ಲಿ ನಡೆದ ರಸ್ತೆ ಅಭಿವೃದ್ದಿ ಕಾಮಗಾರಿಯ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷರಾಗಿ ನೇಮಕವಾಗಿರುವ ಬಗ್ಗೆ ನೇಮಕಾತಿ ಆದೇಶ ಪತ್ರವನ್ನು ಎಂ.ಆರ್.ಮನು ಅವರಿಗೆ ವಿತರಣೆ ಮಾಡಿ ಮಾತನಾಡಿದ ಶಾಸಕರು ಎಂ.ಆರ್.ಮನು ಅವರ ನೇತೃತ್ವದಲ್ಲಿ ಇತ್ತೀಚೆಗೆ ಮಡುವಿನಕೋಡಿ ಗ್ರಾಮದಲ್ಲಿ ಯುವ ಜೆಡಿಎಸ್ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಹಾಗೂ ಶಾಸಕ ಹೆಚ್.ಟಿ.ಮಂಜು ಅವರ ಅಧ್ಯಕ್ಷತೆಯಲ್ಲಿ ನಡೆದ ಜೆಡಿಎಸ್ ಬೆಳ್ಳಿ ಹಬ್ಬದ ಯಶಸ್ಸಿಗೆ ಶ್ರಮಿಸಿದ್ದರು. ಎಂ.ಆರ್.ಮನು ಅವರ ಸಂಘಟನಾ ಶಕ್ತಿಯನ್ನು ಗಮನಿಸಿ ಮಂಡ್ಯ ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷರನ್ನಾಗಿ ಜಿಲ್ಲಾಧ್ಯಕ್ಷರಾದ ಡಿ.ರಮೇಶ್ ಅವರು ನೇಮಕ ಮಾಡಿರುತ್ತಾರೆ.

ಎಂ.ಆರ್.ಮನು ಅವರು ತಮ್ಮ ಸ್ವಂತ ಖರ್ಚಿನಿಂದ ಮಡುವಿನಕೋಡಿ ಗ್ರಾಮದಲ್ಲಿ ಶುದ್ದ ಕುಡಿಯುವ ನೀರಿನ ಘಟಕ ಆರಂಭಿಸಿ ಗ್ರಾಮದ ಜನತೆಗೆ ಶುದ್ದ ಕುಡಿಯುವ ನೀರು ಸಿಗುವಂತೆ ಮಾಡಿದ್ದಾರೆ. ಇದಲ್ಲದೆ ಉಚಿತ ನೀರಿನ ಟ್ಯಾಂಕರ್ ಮೂಲಕ ಮನೆ ಮನೆಗೆ ಹಾಗೂ ಗ್ರಾಮದಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಿಗೆ ಉಚಿತವಾಗಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುತ್ತಿದ್ದಾರೆ.

ಇದಕ್ಕೂ ಮಾಜಿ ಸ್ಪೀಕರ್ ಕೃಷ್ಣ ರವರ ನೇತೃತ್ವದಲ್ಲಿ ತಾಲ್ಲೂಕಿನ ಪ್ರತಿಭಾವಂತ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣೆ ಹಾಗೂ ನಗದು ಪ್ರತಿಭಾ ಪುರಸ್ಕಾರ ಮಾಡಿದ್ದಾರೆ. ಉಚಿತ ಆರೋಗ್ಯ ತಪಾಸಣಾ ಶಿಬಿರ ಮಾಡಿ ಗ್ರಾಮದ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಕಳೆದ ಹತ್ತಾರು ವರ್ಷಗಳಿಂದ ಕೈಜೋಡಿಸಿರುತ್ತಾರೆ.
ಇಂತಹ ಸಮಾಜಮುಖಿ ವ್ಯಕ್ತಿತ್ವದ ಎಂ.ಆರ್.ಮನು ಅವರು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗಿ ಉತ್ತಮವಾಗಿ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಈಗ ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದ್ದು ಕೂಡಲೇ ಜವಾಬ್ದಾರಿ ವಹಿಸಿಕೊಂಡು ಜೆಡಿಎಸ್ ಪಕ್ಷವನ್ನು ಮತ್ತಷ್ಟು ಶಕ್ತಿಯುತವಾಗಿ ತಾಲ್ಲೂಕಿನಲ್ಲಿ ಹಾಗೂ ಜಿಲ್ಲಾಧ್ಯಂತ ಸಂಘಟಿಸಲು ಶ್ರಮಿಸಬೇಕು ಎಂದು ಶಾಸಕ ಹೆಚ್.ಟಿ.ಮಂಜು ಅವರು ಸಲಹೆ ನೀಡಿದರು.

ನೂತನ ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷ ಎಂ.ಆರ್.ಮನು ಮಾತಮಾಡಿ ನನ್ನನ್ನು ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷ ಸ್ಥಾನಕ್ಕೆ ನೇಮಕಮಾಡಲು ಸಹಕಾರ ನೀಡಿದ ಶಾಸಕ ಹೆಚ್.ಟಿ.ಮಂಜಣ್ಣ ಹಾಗೂ ಜಿಲ್ಲಾ ಜೆಡಿಎಸ್ ಅಧ್ಯಕ್ಷರಾದ ಡಿ.ರಮೇಶ್, ತಾಲ್ಲೂಕು ಜೆಡಿಎಸ್ ಅಧ್ಯಕ್ಷರಾದ ಮಲ್ಲೇನಹಳ್ಳಿ ಮೋಹನ್ ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ.
ಪಕ್ಷವು ವಹಿಸಿರುವ ಜವಾಬ್ದಾರಿಯನ್ನು ಅರಿತು ಪಕ್ಷವನ್ನು ಸಂಘಟಿಸಲು ಪ್ರಾಮಾಣಿಕವಾದ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ತಾಲೂಕು ಟಿಎಪಿಸಿಎಂ ಅಧ್ಯಕ್ಷ ಬಲದೇವ್, ಉಪಾಧ್ಯಕ್ಷ ಕಾಯಿ ಮಂಜೇಗೌಡ, ತಾಲೂಕು ಯುವ ಜೆಡಿಎಸ್ ಅಧ್ಯಕ್ಷ ಮಹಾದೇವೇಗೌಡ, ತಾಲೂಕು ಜೆಡಿಎಸ್ ಮಹಿಳಾ ಘಟಕದ ಕಾರ್ಯದರ್ಶಿ ರತಿ ಮಹಾದೇವ್, ಪಿ ಎಲ್ ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ರಾಮಕೃಷ್ಣೇಗೌಡ, ಜೆಡಿಎಸ್ ಮುಖಂಡರಾದ ಮದ್ದಿಕ್ಯಾಚಮನಹಳ್ಳಿ ಸಂದೇಶ್, ನಾಟನಹಳ್ಳಿ ಸಾಗರ್, ಹೊಸಕೊಟೆ ಶಶಿಕುಮಾರ್, ರಾಜೇಶ್, ಕೊಮ್ಮೇನಹಳ್ಳಿ ನಾಗರಾಜು, ಆಡಿಟರ್ ಬಸವರಾಜು, ಇಂಜಿನಿಯರ್ ಚೇತನ್, ಶಾಸಕರ ಆಪ್ತ ಸಹಾಯಕ ಅರಳಕುಪ್ಪೆ ಪ್ರತಾಪ್ ಮತ್ತಿತರರು ಉಪಸ್ಥಿತರಿದ್ದರು.
– ಶ್ರೀನಿವಾಸ್ ಆರ್.
