
ಹಾಸನ – ಹಾಸನ ಜಿಲ್ಲೆಯಲ್ಲಿ ಮೀನುಗಾರಿಕೆ ಇಲಾಖೆ ವತಿಯಿಂದ 2020-21 ನೇ ಸಾಲಿನಿಂದ 2024-25 ನೇ ಸಾಲಿನವರೆಗೆ ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ಸದರಿ ಯೋಜನೆಯಡಿ 2020-21, 2021-22, 2022-23 ಮತ್ತು 2023-24 ನೇ ಸಾಲಿನ ಬಾಕಿ ಉಳಿದ ಗುರಿಗಳಿಗೆ ಈ ಕೆಳಕಂಡ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸಲಾಗುತ್ತಿದ್ದು, ಕಾರ್ಯಕ್ರಮ ಅನುಷ್ಟಾನಗೊಳಿಸಿದ ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಘಟಕ ವೆಚ್ಚದ ಶೇಕಡ ೪೦ ರಷ್ಟು ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಮಹಿಳಾ ಫಲಾನುಭವಿಗಳಿಗೆ ಘಟಕ ವೆಚ್ಚ ಶೇಕಡ 60 ರಷ್ಟು ಸಹಾಯಧನ ನೀಡಲಾಗುವುದು.
ಕಾರ್ಯಕ್ರಮಗಳ ವಿವರ Construction of New Grow-out Ponds (ಹೊಸ ಮೀನುಕೃಷಿ ಕೊಳಗಳ ನಿರ್ಮಾಣ) Motor Cycle with Ice Box (ದ್ವಿಚಕ್ರ ವಾಹನ ಮತ್ತು ಐಸ್ಬಾಕ್ಸ್) ಘಟಕಗಳನ್ನು ಅನುಷ್ಟಾನಗೊಳಿಸಲು ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ತಾಲ್ಲೂಕು ಮಟ್ಟದ ಕಛೇರಿಗಳಿಗೆ ಸಲ್ಲಿಸಬೇಕಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:07.03.2025 ರಂದು ಸಂಜೆ 5.30 ಆಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲ್ಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರು ಸಕಲೇಶಪುರ 9986398624ಮೀನುಗಾರಿಕೆ ಸಹಾಯಕ ನಿರ್ದೇಶಕರ ಗೊರೂರು ಹಾಗೂ ಹೊಳೆನರಸೀಪುರ (ಪ್ರಭಾರ) 9964395651ಮೀನುಗಾರಿಕೆ ಸಹಾಯಕ ನಿರ್ದೇಶಕರು ಹಾಸನ ಹಾಗೂ ಚನ್ನರಾಯಪಟ್ಟಣ (ಪ್ರಭಾರ) 8296125312,, ಮೀನುಗಾರಿಕೆ ಸಹಾಯಕ ನಿರ್ದೇಶಕರು ಅರಸೀಕೆರೆ8549933411, ಮೀನುಗಾರಿಕೆ ಸಹಾಯಕ ನಿರ್ದೇಶಕರು ಬೇಲೂರು 7411278429, , ಮೀನುಗಾರಿಕೆ ಸಹಾಯಕ ನಿರ್ದೇಶಕರು ಅರಕಲಗೂಡು 8147806919, , ಮೀನುಗಾರಿಕೆ ಸಹಾಯಕ ನಿರ್ದೇಶಕರು ಆಲೂರು (ಪ್ರಭಾರ) 9008419748 ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಉಪ ನಿರ್ದೇಶಕರು ತಿಳಿಸಿದ್ದಾರೆ.