ಬೆಂಗಳೂರು- ನಾಲ್ಕು ಸಾರಿಗೆ ನಿಗಮಗಳ ಕಾರ್ಮಿಕದ ವಿವಿಧ ಬೇಡಿಕೆಗಳ ಬಗ್ಗೆ ಚರ್ಚಿಸಲು ಏ.15 ರಂದು ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸಂಜೆ 4.00 ಗಂಟೆ ಸಿಎಂ ಗೃಹ ಕಛೇರಿ ಕಾವೇರಿಯಲ್ಲಿ ಸಭೆ ನಡೆಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಿರ್ದೇಶಕರು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಾಲ್ಕು ಸಾರಿಗೆ ನಿಗಮಗಳಲ್ಲಿರುವ ಸಮಸ್ಯೆ ಹಾಗೂ ವಿವಿಧ ಬೇಡಿಕೆಗಳ ಕುರಿತು ಚರ್ಚೆ ನಡೆಸುವುದಾಗಿ ಮುಖ್ಯ ಮಂತ್ರಿಗಳು ಹೇಳಿದ್ದು, ಅದರಂತೆ ಏ.15 ರಂದು ಅವರ ಗೃಹ ಕಛೇರಿಯಲ್ಲಿ ಸಭೆ ನಡೆಸಲು ನಿರ್ಧರಿಸಿದ್ದು, ಕರಾರಸಾನಿ ಕಾರ್ಮಿಕ ಸಂಘಟನೆಯ ಮುಖ್ಯ ಸದಸ್ಯರು ಈ ಚರ್ಚಾ ಸಭೆಯಲ್ಲಿ ಭಾಗವಹಿಸುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಿರ್ದೇಶಕರು ಸಭಾ ಸೂಚನೆಯನ್ನು ನೀಡಿದ್ದಾರೆ.

