ಚನ್ನರಾಯಪಟ್ಟಣ: ಮಾಜಿ ಮುಖ್ಯಮಂತ್ರಿ ಡಿ. ದೇವರಾಜ್ ಅರಸ್ ಅವರ 110ನೇ ಜನ್ಮದಿನೋತ್ಸವವನ್ನು ತಾಲೂಕು ದಂಡಾಧಿಕಾರಿ ಶಂಕರಪ್ಪ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಅವರು, “ಡಿ. ದೇವರಾಜ್ ಅರಸ್ ಅವರು ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತರುವಲ್ಲಿ ಯಶಸ್ವಿಯಾಗಿದ್ದರು. ಅವರ ಅಧಿಕಾರಾವಧಿಯಲ್ಲಿ ‘ಉಳುವವನೇ ಭೂಮಿ ಒಡೆಯ’ ಎಂಬ ಮಹತ್ವದ ಕಾಯ್ದೆಯನ್ನು ಜಾರಿಗೆ ತರಲಾಯಿತು. ಅಲ್ಪಸಂಖ್ಯಾತರು, ಹಿಂದುಳಿದವರು, ದಲಿತ ವರ್ಗಗಳಿಗೆ ಸಾಮಾಜಿಕ ನ್ಯಾಯ ಒದಗಿಸಲು ಶ್ರಮಿಸಿದ ಪ್ರಥಮ ಮುಖ್ಯಮಂತ್ರಿ ದೇವರಾಜ್ ಅರಸ್ ಆಗಿದ್ದರು” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ರಾಜೇಶ್ ಚೌಹಾಣ್, ಪುರಸಭಾ ಅಧ್ಯಕ್ಷ ಮೋಹನ್, ಉಪಾಧ್ಯಕ್ಷೆ ಕವಿತಾ ರಾಜು, ಸ್ಥಾಯಿ ಸಮಿತಿ ಅಧ್ಯಕ್ಷ ಗಣೇಶ್, ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಹಾಗೂ ನಿಲಯ ಪಾಲಕರಾದ ಜಗನ್ನಾಥ್, ವಾರ್ಡನ್ ಅನಂತ್ ಹಾಗೂ ಇತರರು ಹಾಜರಿದ್ದರು.
