
ತುಮಕೂರು : ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಅವರು ಮಂಗಳವಾರ ನವದೆಹಲಿಯ ಸಂಸತ್ ಭವನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ತುಮಕೂರು, ಚಿತ್ರದುರ್ಗ, ದಾವಣಗೆರೆ ರೈಲ್ವೇ ಮಾರ್ಗಕ್ಕೆ ಸಂಬಂಧಪಟ್ಟ ಭಾಗವಾದ ತಿಮ್ಮರಾಜನಹಳ್ಳಿ ಮತ್ತು ತಾವರೆಕೆರೆ ಮಧ್ಯದ ರೈಲ್ವೇ ಕಾಮಗಾರಿ ಕೈಗೊಳ್ಳಲು ರೈಲ್ವೇ ಮಂಡಳಿಯು ಕೇಂದ್ರ ಗೃಹ ಇಲಾಖೆಗೆ ಕಳುಹಿಸಿದ ಪ್ರಸ್ತಾವನೆಗೆ ಅನುಮೋದನೆ ನೀಡಬೇಕೆಂದು ಮನವಿ ಮಾಡಿದರು.
ಮನವಿಗೆ ಕೇಂದ್ರ ಗೃಹ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿರುವುದು ಸಂತಸ ತಂದಿದೆ. ಕರ್ನಾಟಕ ರಾಜ್ಯದ ಹಾಗೂ ವಿಶೇಷವಾಗಿ ತುಮಕೂರು ಜನತೆಯ ಪರವಾಗಿ ಅಮಿತ್ ಶಾ ಅವರಿಗೆ ಸೋಮಣ್ಣ ಅವರು ಧನ್ಯವಾದ ತಿಳಿಸಿದ್ದಾರೆ.