ರಾಮನಾಥಪುರ- : ದೇಶದ ಬದಲಾವಣೆ ವಿದ್ಯಾಭ್ಯಾಸದಿಂದ ಮಾತ್ರ ಸಾಧ್ಯ ಆದ್ದರಿಂದ ರೈತರು ತಮ್ಮ ಮಕ್ಕಳನ್ನು ಬುದ್ಧಿವಂತರನ್ನಾಗಿ, ವಿದ್ಯಾವಂತರಾಗಿ ಮಾಡಬೇಕು. ಎಲ್ಲಾ ಪೋಷಕರೂ ತಮ್ಮ ಮಕ್ಕಳ ಭವಿಷ್ಯದ ಬಗ್ಗೆ ಚಿಂತಿಸಿ ಅವರಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸಿ ಸಮಾಜದಲ್ಲಿ ಉತ್ತಮ ನಾಗರೀಕರಾಗಿ, ಸುಸಂಸ್ಕೃತರಾಗಿ ಬಾಳುವಂತೆ ಮಾಡಬೇಕು ಎಂದು ಮಾಜಿ ಸಚಿವರು ಹಾಗೂ ಶಾಸಕರು ಎ. ಮಂಜು ಹೇಳಿದರು.

ಕೊಣನೂರು BSS ಪದವಿ ಪೂರ್ವ ಕಾಲೇಜು ಕ್ರೀಡೆ ಸಾಂಸ್ಕೃತಿಕ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರಥಮ ಪಿಯುಸಿ ಮಕ್ಕಳಿಗೆ ಸ್ವಾಗತ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಅವರು ಇಡೀ ದೇಶದ ಬದಲಾವಣೆ ಶಿಕ್ಷಣದಿಂದ ಮಾತ್ರ ಸಾಧ್ಯ ಶಿಕ್ಷಣವೇ ಶಕ್ತಿ ಎಂಬಂತೆ ಪ್ರತಿಯೊಬ್ಬರೂ ಉತ್ತಮ ಶಿಕ್ಷಣ ಪಡೆದು ತಮ್ಮ ಮುಂದಿನ ಜೀವನ ರೂಪಿಸಿಕೊಳ್ಳುವಂತೆ ಮನವಿ ಮಾಡಿದರು.

ಇತ್ತೀಚಿನ ದಿನಗಳಲ್ಲಿ ಮಕ್ಕಳು ಅತಿ ಹೆಚ್ಚಾಗಿ ಮೊಬೈಲ್ ಬಳಕೆ ಮಾಡುತ್ತಿದ್ದು ಇದರಿಂದ ದುಷ್ಪರಿಣಾಮಗಳು ಹೆಚ್ಚಾಗುತ್ತಿದ್ದು ಮೊಬೈಲ್ ಬಳಕೆಯಿಂದ ದೂರವಿರುವಂತೆ ವಿದ್ಯಾರ್ಥಿಗಳಿಗೆ ಮನವಿ ಮಾಡಿದರು.

ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಪ್ರತಿದಿನ ಗಮನ ಹರಿಸುವಂತೆ ಮನವಿ ಮಾಡಿದರು, ಕಾರ್ಯಕ್ರಮದಲ್ಲಿ ಪ್ರಾಂಶುಪಾಲರು ಕಾಲೇಜು ಅಭಿವೃದ್ಧಿ ಸಮಿತಿ ಎಲ್ಲಾ ಸದಸ್ಯರು ಪೋಷಕರು ಉಪಸ್ಥಿತರಿದ್ದರು.
– ಕುಮಾರಸ್ವಾಮಿ ಎಂ.ಎನ್.
