ಶಾಲೆ-ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್ ಚಿಂತನೆ: 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಕಡಿವಾಣ ಸಾಧ್ಯತೆ

ರಾಜ್ಯದಲ್ಲಿ ಶಾಲೆ ಮತ್ತು ಕಾಲೇಜುಗಳಲ್ಲಿ ಮೊಬೈಲ್ ಬಳಕೆಗೆ ನಿರ್ಬಂಧ ವಿಧಿಸುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದ್ದು, 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ನಿಯಮ ತರಲು ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಡ್ರಗ್ಸ್ ಮುಕ್ತ ಕ್ಯಾಂಪಸ್ ಹಾಗೂ ವಿದ್ಯಾರ್ಥಿ ಚುನಾವಣೆಗಳ ಪುನರಾರಂಭವೂ ಚರ್ಚೆಯಲ್ಲಿದೆ.