ಮೂಡಿಗೆರೆ: ಜೆ.ಎಸ್. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಭಾನುವಾರ ಸಂಭ್ರಮದಿಂದ ಆಚರಿಸಲಾಯಿತು.
ಶಾಲೆಯ ನಿರ್ದೇಶಕರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ವಿವಿಧ ಯೋಗಾಸನಗಳನ್ನು ಪ್ರದರ್ಶಿಸಿದರು. ಯೋಗಾಭ್ಯಾಸವು ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಗೆ ಸಹಕಾರಿಯಾಗುತ್ತದೆ ಎಂಬ ಸಂದೇಶವನ್ನು ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಿಗೆ ತಿಳಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಿ.ಎನ್. ಜಗದೀಶ್ ಭಟ್ ಪಲ್ಗುಣಿ, ಮಾಜಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಗೀತಾ ಅಜಿತ್, ವಾರ್ಡ್ ಸಂಖ್ಯೆ 5ರ ಮಾಜಿ ಸದಸ್ಯ ಮನೋಜ್ ಕುಮಾರ್, ವಾರ್ಡ್ ಸಂಖ್ಯೆ 9ರ ಮಾಜಿ ಸದಸ್ಯ ಹಂಝ ಎಂ.ಎ. ಹಾಗೂ ಜೆ.ಎಸ್. ಶಿಕ್ಷಣ ಸಂಸ್ಥೆ ಮತ್ತು ಬಣಕಲ್ನ ರಿವರ್ ವ್ಯೂ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಹಾಗೂ ನಿರ್ದೇಶಕರಾದ ಮೊಹಮ್ಮದ್ ಇಮ್ರಾನ್ ಭಾಗವಹಿಸಿದ್ದರು.
ಶಾಲೆಯ ಪ್ರಾಂಶುಪಾಲರು, ಶಿಕ್ಷಕ ವೃಂದ ಹಾಗೂ ಸಿಬ್ಬಂದಿ ವರ್ಗದವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
