ಪಹಲ್ಗಾಮ್ ಭಯೋತ್ಪಾದಕ ದಾಳಿ: ಜವಾಬ್ದಾರಿಯುತ ಪರಿಹಾರ ಕ್ರಮ ಕೈಗೊಳ್ಳಿ: ಭಾರತ-ಪಾಕಿಸ್ತಾನಕ್ಕೆ ಅಮೆರಿಕಾ ಒತ್ತಾಯ

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಿದ್ದು, ಈ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ಅಮೆರಿಕಾ ಬಿಕ್ಕಟ್ಟಿಗೆ “ಜವಾಬ್ದಾರಿಯುತ ನಿರ್ಣಯ” ಕೈಗೊಳ್ಳುವಂತೆ ಎರಡೂ ರಾಷ್ಟ್ರಗಳಿಗೆ ಒತ್ತಾಯಿಸಿದೆ.
ಭಾರತ ಹಾಗೂ ಪಾಕಿಸ್ತಾನ ನಡುವಣ ಬಿಕ್ಕಟ್ಟಿನ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ನಾವು ಭಾರತ ಹಾಗೂ ಪಾಕಿಸ್ತಾನ ಸರ್ಕಾರಗಳೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ಅಮೆರಿಕ ವಿದೇಶಾಂಗ ಇಲಾಖೆಯ ವಕ್ತಾರರು ಹೇಳಿದ್ದಾರೆ.
****
Cyclone Effect: ಬೆಂಗಳೂರು ಸೇರಿ ರಾಜ್ಯಾದ್ಯಂತ ಮುಂದಿನ 5 ದಿನ ಗುಡುಗು ಸಹಿತ ಮಳೆ; IMD


ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಈಗಾಗಲೇ ರೂಪುಗೊಂಡಿರುವ ಚಂಡಮಾರುತದ ಪರಿಚಲನೆಯ ಪರಿಣಾಮವಾಗಿ ಕರ್ನಾಟಕದಲ್ಲಿ ಮುಂದಿನ 5 ದಿನಗಳ ಕಾಲ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಕರ್ನಾಟಕ ಹವಮಾನ ಇಲಾಖೆ ಮಾಹಿತಿ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಈಗಾಗಲೇ ರೂಪುಗೊಂಡಿರುವ ಚಂಡಮಾರುತದ ಪರಿಚಲನೆಯು ಮರಾಠವಾಡ ಪ್ರದೇಶದಿಂದ ಕರ್ನಾಟಕ ಮತ್ತು ತಮಿಳುನಾಡಿನಾದ್ಯಂತ ಮನ್ನಾರ್ ಕೊಲ್ಲಿಯವರೆಗೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ವಿಸ್ತರಿಸುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
****
ಒಣದ್ರಾಕ್ಷಿ ಬೆಲೆ ಏರಿಕೆ: ನಾಲ್ಕು ವರ್ಷಗಳ ತರುವಾಯ ಉತ್ತರ ಕರ್ನಾಟಕದ ದ್ರಾಕ್ಷಿ ಬೆಳೆಗಾರರ ಮೊಗದಲ್ಲಿ ಮಂದಹಾಸ

ವಿಜಯಪುರ: ನಾಲ್ಕು ವರ್ಷಗಳ ನಿರಂತರ ನಷ್ಟ ಮತ್ತು ಬೆಲೆ ಕುಸಿತದ ನಂತರ, ಒಣದ್ರಾಕ್ಷಿಗೆ ಉತ್ತಮ ಬೆಲೆ ಪಡೆದಿದ್ದರಿಂದ ಉತ್ತರ ಕರ್ನಾಟಕದ ದ್ರಾಕ್ಷಿ ಬೆಳೆಗಾರರ ಮೊಗದಲ್ಲಿ ಅಂತಿಮವಾಗಿ ಮಂದಹಾಸ ಮೂಡಿದೆ. ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಬೆಳೆಗಾರರಿಗೆ ಈ ವರ್ಷ ಸ್ವಲ್ವ ರಿಲೀಫ್ ಸಿಕ್ಕಿದೆ.
ಕೋವಿಡ್ ಸಾಂಕ್ರಾಮಿಕದ ಕಾಲದಲ್ಲಿ, ಒಣದ್ರಾಕ್ಷಿ ಬೆಲೆ ಕೆಜಿಗೆ 60 ರಿಂದ 150 ರೂ.ಗಳವರೆಗೆ ಇತ್ತು, ಇದರಿಂದ ಉತ್ಪಾದನಾ ವೆಚ್ಚವನ್ನು ಸಹ ಭರಿಸಲಾಗದೆ ರೈತರು ಸಾಲದ ಸುಳಿಯಲ್ಲಿ ಸಿಲುಕಿದ್ದರು. ಇದೀಗ ಕೆಜಿಗೆ 180ರಿಂದ 380 ರೂ.ವರೆಗೆ ಬೆಲೆ ಏರಿಕೆಯಾಗಿದ್ದು, ರೈತರು ಗಣನೀಯ ಚೇತರಿಕೆ ಕಾಣುತ್ತಿದ್ದಾರೆ. ಕೆಲವು ರೈತರು ದಾಖಲೆಯ-ಹೆಚ್ಚಿನ ದರಗಳನ್ನು ಪಡೆದುಕೊಂಡಿರುವುದು ಭರವಸೆ ಮೂಡಿಸಿದೆ.
*****
ನಿಯಮ ಉಲ್ಲಂಘಿಸಿ ಕಟ್ಟಡ ನಿರ್ಮಿಸುವವರಿಗೆ ನೀರು, ಕರೆಂಟ್ ಕಟ್: ಪಾಲಿಕೆ ಶಿಸ್ತು ಕ್ರಮಕ್ಕೆ BWSSB- BESCOM ಸಾಥ್!


ಬೆಂಗಳೂರು: ಕಟ್ಟಡ ನಿರ್ಮಾಣ ಮಾಡುವಾಗ ನಿಯಮ ಉಲ್ಲಂಘಿಸಿದವರ ವಿರುದ್ಧ ಬಿಬಿಎಂಪಿ ಕೈಗೊಳ್ಳುವ ಶಿಸ್ತು ಕ್ರಮಕ್ಕೆ ಬೆಂಗಳೂರು ಜಲಮಂಡಳಿ ಮತ್ತು ಬೆಸ್ಕಾಂ ಸಾಥ್ ಕೊಡಲು ಮುಂದಾಗಿವೆ.
ಅಕ್ಟೋಬರ್ 22, 2024 ರಂದು ಒಂಬತ್ತು ಜನರ ಸಾವಿಗೆ ಕಾರಣವಾದ ಬಾಬುಸಾಬ್ ಪಾಳ್ಯದಲ್ಲಿ ಕಟ್ಟಡದ ಕುಸಿತ ಪ್ರಕರಣ ನಂತರ, ನಿಯಮ ಉಲ್ಲಂಘಿಸಿರುವ ನಿರ್ಮಾಣ ಹಂತದಲ್ಲಿರುವ ಕಟ್ಟಡಗಳಿಗೆ ವಿದ್ಯುತ್ ಮತ್ತು ಒಳಚರಂಡಿ ಸಂಪರ್ಕಗಳನ್ನು ಕಡಿತಗೊಳಿಸುವಂತೆ ಲೋಕಾಯುಕ್ತರು ಸೂಚಿಸಿದ್ದರು.
ಉತ್ತರ ಬೆಂಗಳೂರಿನಲ್ಲಿ ಒಂಬತ್ತು ಮಂದಿಯನ್ನು ಬಲಿ ತೆಗೆದುಕೊಂಡ ದುರಂತದ ನಂತರ, ಏಳು ದಿನಗಳ ಒಳಗೆ ನಿಯಮ ಉಲ್ಲಂಘಿಸಿದ ಕಟ್ಟಡಕ್ಕೆ ಶಾಶ್ವತವಾಗಿ ವಿದ್ಯುತ್ ಸಂಪರ್ಕ ಕಡಿತಗೊಳಿಸುವಂತೆ ಬೆಸ್ಕಾಂ ಗೆ ಪಾಲಿಕೆ ನವೆಂಬರ್ 28, 2024 ರಂದು ಸುತ್ತೋಲೆ ಹೊರಡಿಸಿತು.
****
ಶರವೇಗದ ಶತಕ: ವೈಭವ್ ಸೂರ್ಯವಂಶಿ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್

IPL 2025 RR vs GT: ಇಂಡಿಯನ್ ಪ್ರೀಮಿಯರ್ ಲೀಗ್ನ (ಐಪಿಎಲ್ 2025) 47ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್ಗಳಲ್ಲಿ 209 ರನ್ ಕಲೆಹಾಕಿತು. ಈ ಗುರಿ ಬೆನ್ನತ್ತಿದ ರಾಜಸ್ಥಾನ್ ರಾಯಲ್ಸ್ ಪರ ವೈಭವ್ ಸೂರ್ಯವಂಶಿ (Vaibhav Suryavanshi) 38 ಎಸೆತಗಳಲ್ಲಿ 11 ಸಿಕ್ಸ್ ಹಾಗೂ 7 ಫೋರ್ಗಳೊಂದಿಗೆ 101 ರನ್ ಬಾರಿಸಿದ್ದರು. ಈ ಸ್ಪೋಟಕ ಸೆಂಚುರಿ ನೆರವಿನಿನೊಂದಿಗೆ ರಾಜಸ್ಥಾನ್ ರಾಯಲ್ಸ್ 15.5 ಓವರ್ಗಳಲ್ಲಿ 212 ರನ್ ಬಾರಿಸಿ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ
