1.ರಾಮ ನವಮಿ ವಿಶೇಷ: ಅಯೋಧ್ಯೆ ಬಾಲ ರಾಮನ ಹಣೆ ಬೆಳಗಿದ ಸೂರ್ಯ ತಿಲಕ!


ಅಯೋಧ್ಯೆ ರಾಮ ಮಂದಿರ ಇಂದು ರಾಮ ನವಮಿ ದಿನ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದೆ. ರಾಮ ಮಂದಿರ ನಿರ್ಮಾಣವಾದ ನಂತರ ಇದೆ ಮೊದಲ ಬಾರಿ ಅಯೋಧ್ಯೆಯಲ್ಲಿ ರಾಮ ನವಮಿ ಆಚರಣೆ ನೆರವೇರಿದ್ದು, ಈ ಸಂದರ್ಭದಲ್ಲಿ ಬಾಲರಾಮನ ವಿಗ್ರಹ ರಾಮಲಲ್ಲಾನ ಹಣೆಯ ಮೇಲೆ ಸೂರ್ಯರಶ್ಮಿ ನೇರವಾಗಿ ಸ್ಪರ್ಶಿಸಿದೆ.
*********************************************************************************
2.Waqf Bill: ಭಾರತದಲ್ಲಿ ಹೊಸ ವಕ್ಫ್ ಕಾನೂನು ಜಾರಿಗೆ, ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಕ್ಫ್ ತಿದ್ದುಪಡಿ ಮಸೂದೆಗೆ ಅನುಮೋದನೆ ನೀಡಿದ್ದಾರೆ. ಈ ಮಸೂದೆಯನ್ನು ಇತ್ತೀಚೆಗೆ ಲೋಕಸಭೆ ಮತ್ತು ರಾಜ್ಯಸಭೆ ಅಂಗೀಕರಿಸಿವೆ. ಶನಿವಾರ ರಾಷ್ಟ್ರಪತಿ ಅಂಕಿತದ ನಂತರ ವಕ್ಫ್ ತಿದ್ದುಪಡಿ ಮಸೂದೆ ಅಧಿಕೃತವಾಗಿ ಕಾನೂನಾನಿ ಮಾರ್ಪಟ್ಟಿದೆ. ಈ ಹೊಸ ಕಾನೂನನ್ನು ವಕ್ಫ್ ತಿದ್ದುಪಡಿ ಕಾಯ್ದೆ 2025 ಎಂದು ಕರೆಯಲಾಗುತ್ತದೆ. ಇದು ವಕ್ಫ್ ಆಸ್ತಿಗಳ ನಿರ್ವಹಣೆ, ನೋಂದಣಿ ಮತ್ತು ಸರ್ಕಾರಿ ಭೂಮಿಯ ಮೇಲಿನ ಹಕ್ಕುಗಳ ಬಗ್ಗೆ ಕಠಿಣ ನಿಯಮಗಳನ್ನು ವಿಧಿಸುತ್ತದೆ.
**************************************************************
3.ಕಾಂಗ್ರೆಸ್, AIMIM ನಂತರ ವಕ್ಫ್ ಮಸೂದೆ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ AAP
ನವದೆಹಲಿ: ಕಾಂಗ್ರೆಸ್ ಹಾಗೂ ಎಐಎಂಐಎಂ ನಂತರ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಅವರು ವಕ್ಫ್ (ತಿದ್ದುಪಡಿ) ಮಸೂದೆ, 2025ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಖಾನ್ ತಮ್ಮ ಅರ್ಜಿಯಲ್ಲಿ, ವಕ್ಫ್(ತಿದ್ದುಪಡಿ) ಮಸೂದೆ “ಅಸಂವಿಧಾನಿಕ ಮತ್ತು ಸಂವಿಧಾನದ 14, 15, 21, 25, 26, 29, 30 ಮತ್ತು 300-A ವಿಧಿಗಳ ಉಲ್ಲಂಘನೆಯಾಗಿದೆ”. ಹೀಗಾಗಿ ಅದನ್ನು ರದ್ದುಗೊಳಿಸಬೇಕು ಎಂದು ಕೋರಿದ್ದಾರೆ.
“ಮಸೂದೆಯು ಸಂವಿಧಾನದ 14, 15, 21, 25, 26, 29, 30 ಮತ್ತು 300-A ವಿಧಿಗಳ ಅಡಿಯಲ್ಲಿ ಪ್ರತಿಪಾದಿಸಲಾದ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ. ಇದು ಮುಸ್ಲಿಮರ ಧಾರ್ಮಿಕ ಮತ್ತು ಸಾಂಸ್ಕೃತಿಕ ಸ್ವಾಯತ್ತತೆಯನ್ನು ಮೊಟಕುಗೊಳಿಸುತ್ತದೆ. ಅನಿಯಂತ್ರಿತ ಕಾರ್ಯಾಂಗ ಹಸ್ತಕ್ಷೇಪವನ್ನು ಸಕ್ರಿಯಗೊಳಿಸುತ್ತದೆ ಮತ್ತು ಅವರ ಧಾರ್ಮಿಕ ಮತ್ತು ದತ್ತಿ ಸಂಸ್ಥೆಗಳನ್ನು ನಿರ್ವಹಿಸಲು ಅಲ್ಪಸಂಖ್ಯಾತರ ಹಕ್ಕುಗಳನ್ನು ದುರ್ಬಲಗೊಳಿಸುತ್ತದೆ” ಎಂದು ಖಾನ್ ಅರ್ಜಿಯಲ್ಲಿ ತಿಳಿಸಿದ್ದಾರೆ.
************************************************************************************
4.ಅನಧಿಕೃತವಾಗಿ ಕಟ್ಟಡ ನಿರ್ಮಿಸಿದವರಿಗೆ ಶಾಕ್ ಕೊಟ್ಟ ಬಿಬಿಎಂಪಿ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಕ್ರಮ ಕಟ್ಟಡ ನಿರ್ಮಾಣಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಸುಪ್ರೀಂ ಕೋರ್ಟ್ ಆದೇಶದಂತೆ, ಅನಧಿಕೃತ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಬೆಸ್ಕಾಂಗೆ ಸೂಚನೆ ನೀಡಿದೆ. ಬಿಬಿಎಂಪಿ ಕಾಯ್ದೆ 2020ರ ಕಲಂ 248(3) ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಸುತ್ತೋಲೆಯಲ್ಲಿ ತಿಳಿಸಿದೆ.
*********************************************************************************
5.ಆದಾಯ ಮೀರಿ ಆಸ್ತಿ ಗಳಿಗೆ ಆರೋಪ: ಕೋರ್ಟ್ ಆದೇಶ, ಕೆಎಸ್ ಈಶ್ವರಪ್ಪಗೆ ಸಂಕಷ್ಟ

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆಯ ಆರೋಪದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅಬರಿಗೆ ಸಂಕಷ್ಟ ಎದುರಾಗಿದೆ. ಆದಾಯ ಮೀರಿ ಆಸ್ತಿ ಗಳಿಗೆ ಆರೋಪದ ಪ್ರಕರಣದ ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಮೂರು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಹೇಳಿದೆ.


