ಪಾಕ್ ಮೇಲೆ ಭಾರತ ಯುದ್ಧ ಭೀತಿ: ದಯವಿಟ್ಟು ಆ ತಪ್ಪು ಮಾಡಬೇಡಿ… ಹಿಂದೂಗಳ ಹತ್ಯೆ ಖಂಡಿಸಿದ ವಿಶ್ವಸಂಸ್ಥೆಯ ಮುಖ್ಯಸ್ಥ ಗುಟೆರೆಸ್!

ನ್ಯೂಯಾರ್ಕ್: ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಖಂಡಿಸಿದ್ದು, ಭಾರತ ಮತ್ತು ಪಾಕಿಸ್ತಾನಗಳು ಸಂಯಮದಿಂದ ವರ್ತಿಸುವಂತೆ ಸಲಹೆ ನೀಡಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹಲವಾರು ವರ್ಷಗಳಲ್ಲಿ ಅತ್ಯುನ್ನತ ಮಟ್ಟದಲ್ಲಿದೆ ಎಂದು ಗುಟೆರೆಸ್ ಸೋಮವಾರ ಹೇಳಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ, ಎರಡೂ ಪಕ್ಷಗಳು ಸಂಯಮದಿಂದ ವರ್ತಿಸಬೇಕು ಮತ್ತು ಉದ್ವಿಗ್ನತೆಯನ್ನು ಪರಿಹರಿಸುವತ್ತ ಗಮನಹರಿಸಬೇಕು. ಮಿಲಿಟರಿ ವಿಧಾನಗಳ ಮೂಲಕ ಯಾವುದೇ ಪರಿಹಾರವನ್ನು ಕಂಡುಹಿಡಿಯಲಾಗುವುದಿಲ್ಲ ಎಂಬುದರಲ್ಲಿ ಯಾರಿಗೂ ಯಾವುದೇ ಸಂದೇಹ ಇರಬಾರದು ಎಂದು ಗುಟೆರೆಸ್ ಹೇಳಿದರು.
***
ಪಾಕ್ ಮೂಲದ ಹ್ಯಾಕರ್ ಗಳ ಅಟ್ಟಹಾಸ: ರಕ್ಷಣಾ ಇಲಾಖೆಯ ಹಲವು ವೆಬ್ಸೈಟ್ಗಳು ‘Hack’

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆಯೇ, ಪಾಕಿಸ್ತಾನಿ ಹ್ಯಾಕರ್ಗಳು ಭಾರತೀಯ ರಕ್ಷಣಾ ವೆಬ್ಸೈಟ್ಗಳನ್ನು ಗುರಿಯಾಗಿಸಿಕೊಂಡು ಸೈಬರ್ ದಾಳಿ ನಡೆಸಿದ್ದಾರೆ.
ರಕ್ಷಣಾ ಸಂಸ್ಥೆಯ ಮೂಲಗಳ ಪ್ರಕಾರ, ಸೈಬರ್ ದಾಳಿಯು ರಕ್ಷಣಾ ಸಿಬ್ಬಂದಿಯ ಲಾಗಿನ್ ರುಜುವಾತುಗಳು ಸೇರಿದಂತೆ ಸೂಕ್ಷ್ಮ ಮಾಹಿತಿಯನ್ನು ಪಾಕ್ ಮೂಲದ ಹ್ಯಾಕರ್ ಗಳು ಹಾಳುಮಾಡಿರಬಹುದು ಎಂದು ಶಂಕಿಸಲಾಗಿದೆ.
ಈ ಕುರಿತು ‘ಪಾಕಿಸ್ತಾನ ಸೈಬರ್ ಫೋರ್ಸ್’ ಎಕ್ಸ್ ನಲ್ಲಿ ಟ್ವೀಟ್ ಮಾಡಿದ್ದು, ‘ಹ್ಯಾಕರ್ಗಳು ಮಿಲಿಟರಿ ಎಂಜಿನಿಯರ್ ಸರ್ವೀಸಸ್ ಮತ್ತು ಮನೋಹರ್ ಪರಿಕ್ಕರ್ ಇನ್ಸ್ಟಿಟ್ಯೂಟ್ ಆಫ್ ಡಿಫೆನ್ಸ್ ಸ್ಟಡೀಸ್ ಅಂಡ್ ಅನಾಲಿಸಿಸ್ನ ಸೂಕ್ಷ್ಮ ಡೇಟಾಗೆ ಪ್ರವೇಶ ಪಡೆದಿದ್ದಾರೆ ಎಂದು ಹೇಳಿಕೊಂಡಿದೆ.
****
ಡಿಸೆಂಬರ್ ವೇಳೆಗೆ ಬೆಂಗಳೂರು ದಕ್ಷಿಣ ಜಿಲ್ಲೆಗೆ ಕಾವೇರಿ ಶಾಶ್ವತ ಕುಡಿಯುವ ನೀರಿನ ಯೋಜನೆ: ಡಿ.ಕೆ.ಶಿವಕುಮಾರ್

ಮಂಡ್ಯ: ಈ ವರ್ಷದ ಡಿಸೆಂಬರ್ ವೇಳೆಗೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ, ಕನಕಪುರ, ಚನ್ನಪಟ್ಟಣ ಹಾಗೂ ಮಾಗಡಿ ತಾಲ್ಲೂಕುಗಳಿಗೆ ಶಾಶ್ವತ ಕುಡಿಯುವ ನೀರು ಸರಬರಾಜು ಯೋಜನೆಯನ್ನು ಪೂರ್ಣಗೊಳಿಸಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ಮಳವಳ್ಳಿ ತಾಲ್ಲೂಕಿನ ಬೆಳಕವಾಡಿಯ ಹಿರೇನಾಗರದಮ್ಮ ದೇವಾಲಯದ ಆವರಣದಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು ತಮ್ಮ ಜಿಲ್ಲೆಯ ಜನರ ಬಾಯಾರಿಕೆ ನೀಗಿಸಲು ಪಣ ತೊಟ್ಟಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಇದರ ಭಾಗವಾಗಿ ಸೋಮವಾರ ಬೆಳಿಗ್ಗೆ ಸತ್ತೇಗಾಲ ಅಣೆಕಟ್ಟಿನ ಬಳಿ ಯೋಜನೆಯ ಆರಂಭಿಕ ಘಟ್ಟದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಸ್ಥಳ ಪರಿಶೀಲನೆ ಮಾಡಿದರು.
*****
ಭಾರತದ ಸಿದ್ಧತೆ ನೋಡಿಯೇ ಬೆವರಿದ ಪಾಕಿಸ್ತಾನ, ಯುದ್ಧ ಭೀತಿ ಇದೆ ಎಂದ ಪಾಕ್ ರಕ್ಷಣಾ ಸಚಿವ

ಇಸ್ಲಾಮಾಬಾದ್, ಮೇ 06: ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಭಾರತ ಯಾವುದೇ ಸಮಯದಲ್ಲಿ ಬೇಕಾದರೂ ದಾಳಿ ನಡೆಸಬಹುದು ಎಂದು Pakistan ರಕ್ಷಣಾ ಸಚಿವ ಖ್ವಾಜಾ ಆಸಿಫ್ ಹೇಳಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಹಾಗೂ ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ಎರಡು ಪರಮಾಣು ಶಸ್ತ್ರಸಜ್ಜಿತ ರಾಷ್ಟ್ರಗಳ ನಡುವಿನ ಪರಿಸ್ಥಿತಿ ಅತ್ಯಂತ ಸೂಕ್ಷ್ಮವಾಗಿರುವ ಸಮಯದಲ್ಲಿ ಈ ಹೇಳಿಕೆ ನೀಡಿದ್ದಾರೆ.
ಎಲ್ಒಸಿಯಲ್ಲಿ ಭಾರತ ಯಾವುದೇ ಸ್ಥಳದ ಮೇಲೆ ದಾಳಿ ಮಾಡಬಹುದು ಎಂಬ ವರದಿಗಳಿವೆ. ಸೂಕ್ತ ಪ್ರತ್ಯುತ್ತರ ನೀಡಲಾಗುವುದು, ಪ್ರಧಾನಿ ನರೇಂದ್ರ ಮೋದಿಯನ್ನು ಟೀಕಿಸಿದ ಅವರು, ರಾಜಕೀಯ ಲಾಭಕ್ಕಾಗಿ ಈ ಪ್ರದೇಶವನ್ನು ಯುದ್ಧದ ಅಂಚಿಗೆ ತಳ್ಳುತ್ತಿದ್ದಾರೆ ಎಂದು ಹೇಳಿದರು.
****
ರಾಜ್ಯದ ಯಾವುದೇ ಗ್ರಾಮದಲ್ಲೂ ಕುಡಿಯುವ ನೀರಿನ ಸಮಸ್ಯೆ ಎದುರಾಗಬಾರದು: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ರಾಜ್ಯದ ಒಂದೇ ಒಂದು ಗ್ರಾಮದಲ್ಲೂ ಶುದ್ಧ ಕುಡಿಯುವ ನೀರಿಗೆ ಯಾವುದೇ ಕಾರಣಕ್ಕೂ ಸಮಸ್ಯೆಯಾಗಬಾರದು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಡಕ್ ಸೂಚನೆ ನೀಡಿದ್ದಾರೆ.
ಸೋಮವಾರ ವಿಧಾನಸೌಧದಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಉಸ್ತುವಾರಿ ಕಾರ್ಯದರ್ಶಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದರು.
ರಾಜ್ಯದಲ್ಲಿ ಎಲ್ಲಿಯೂ ಕುಡಿಯುವ ನೀರಿಗೆ ತೊಂದರೆಯಾಗದಂತೆ ಕಾರ್ಯನಿರ್ವಹಿಸಬೇಕು. ಕುಡಿಯುವ ನೀರಿನ ನಿರ್ವಹಣೆಗೆ ಹಣಕಾಸು ಕೊರತೆಯಿಲ್ಲ. ಪಂಚಾಯತ್ ರಾಜ್ ಇಲಾಖೆಗೆ 60 ಕೋಟಿ ರೂ. ಈಗಾಗಲೇ ಬಿಡುಗಡೆ ಮಾಡಲಾಗಿದೆ. ಜಿಲ್ಲೆಗಳಲ್ಲಿ ತುರ್ತು ಕುಡಿಯುವ ನೀರಿನ ಪೂರೈಕೆಗೆ ಜಿಲ್ಲಾಧಿಕಾರಿಗಳು ಕ್ರಿಯಾ ಯೋಜನೆ ರೂಪಿಸಿ, ಟಾಸ್ಕ್ ಫೋರ್ಸ್ ನಿಂದ ಅನುಮೋದನೆ ಪಡೆದುಕೊಂಡು ಅನುಷ್ಠಾನಗೊಳಿಸಬೇಕು ಎಂದು ಸೂಚನೆ ನೀಡಿದರು.
****

[…] ಮಾರ್ನಿಂಗ್ ಕ್ವಿಕ್ ನ್ಯೂಸ್ ಟೈಮ್ […]