Operation Sindoor: ದೇಶದ ಹೆಣ್ಣುಮಕ್ಕಳಿಗೆ ‘ಆಪರೇಷನ್ ಸಿಂಧೂರ’ ಅರ್ಪಿಸಿದ ಪ್ರಧಾನಿ ಮೋದಿ

ಏಪ್ರಿಲ್ 22ರಂದು ಪಹಲ್ಗಾಮ್ನಲ್ಲಿ ಉಗ್ರರು ದಾಳಿ ಮಾಡಿದ್ದು, ಇದರಲ್ಲಿ 26 ಪ್ರವಾಸಿಗರು ಸಾವನ್ನಪ್ಪಿದ್ದರು. ಇದಾದ ಬಳಿಕ ಭಾರತೀಯ ಸೇನೆ ಮೇ 7ರಂದು ಆಪರೇಶನ್ ಸಿಂಧೂರ ಕಾರ್ಯಾಚರಣೆ ನಡೆಸಿ ಪಾಕಿಸ್ತಾನದಲ್ಲಿದ್ದ ಉಗ್ರರ ನೆಲೆಗಳನ್ನು ಧ್ವಂಸಗೊಳಿಸುವಲ್ಲಿ ಯಶಸ್ವಿಯಾಗಿತ್ತು. ಬಳಿಕ ಪಾಕ್ ಹಾಗೂ ಭಾರತ ನಡುವಿನ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಇದರ ಮಧ್ಯೆ ಇದೀಗ ಪ್ರಧಾನಿ ನರೇಂದ್ರ ಮೋದಿ ಇದೇ ಮೊದಲ ಬಾರಿಗೆ ದೇಶವನ್ನುದ್ದೇಶಿಸಿ ಮಾತನಾಡಿ ಆಪರೇಶನ್ ಸಿಂಧೂರವನ್ನು ಹೆಣ್ಣುಮಕ್ಕಳಿಗೆ ಅರ್ಪಿಸಿದ್ದಾರೆ.
***
ಭಾರತ- ಪಾಕಿಸ್ತಾನ ಕದನ ವಿರಾಮ: ಪರಮಾಣು ಸಂಘರ್ಷವನ್ನು ನಾವು ತಡೆದಿದ್ದೇವೆ- ಕ್ರೆಡಿಟ್ ತೆಗೆದುಕೊಂಡ ಡೊನಾಲ್ಡ್ ಟ್ರಂಪ್!
ವಾಷಿಂಗ್ಟನ್: ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಭಾವ್ಯ ಪರಮಾಣು ಸಂಘರ್ಷವನ್ನು ಅಮೆರಿಕದ ಮಧ್ಯ ಪ್ರವೇಶಿಸಿ ತಡೆಹಿಡಿದಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಹೇಳಿದ್ದಾರೆ.
ನಾಲ್ಕು ರಾತ್ರಿ ಗಡಿಯಾಚೆಗೆ ನಡೆದ ಸೇನಾ ಕಾರ್ಯಾಚರಣೆ ನಂತರ ಉಭಯ ರಾಷ್ಟ್ರಗಳು ಕದನ ವಿರಾಮ ಒಪ್ಪಂದಕ್ಕೆ ಒಪ್ಪಿಗೆ ನೀಡಿದ ನಂತರ ಡೊನಾಲ್ಡ್ ಟ್ರಂಪ್ ಈ ರೀತಿಯ ಹೇಳಿಕೆ ನೀಡಿದ್ದಾರೆ.
ಶ್ವೇತ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಟ್ರಂಪ್, ಪರಮಾಣು ಸಂಘರ್ಷವನ್ನು ನಾವು ತಡೆದಿದ್ದೇವೆ. ಕೆಟ್ಟ ಪರಮಾಣು ಯುದ್ಧ ನಡೆದು ಲಕ್ಷಾಂತರ ಜನರು ಸಾವನ್ನಪ್ಪುವ ಸಾಧ್ಯತೆ ಇರುವುದಾಗಿ ನನಗೆ ಅನಿಸಿತು. ಹಾಗಾಗಿ ಅದರ ಬಗ್ಗೆ ನಾನು ತುಂಬಾ ಹೆಮ್ಮೆ ಪಡುತ್ತೇನೆ. ಬಿಕ್ಕಟ್ಟನ್ನು ಶಮನಗೊಳಿಸುವಲ್ಲಿ ಅಮೆರಿಕದ ರಾಜತಾಂತ್ರಿಕ ಪ್ರಯತ್ನಗಳು ನಿರ್ಣಾಯಕ ಪಾತ್ರ ವಹಿಸಿವೆ ಎಂದರು.
***
ಬೋರ್ ವೆಲ್ ಕೊರೆಸಲು ರಾಜ್ಯ ಅಂತರ್ಜಲ ಪ್ರಾಧಿಕಾರದ ಅನುಮತಿ ಕಡ್ಡಾಯ
ಬೆಂಗಳೂರು: ರಾಜ್ಯದಲ್ಲಿ ಅಂತರ್ಜಲ ಮೂಲಗಳ ಅತಿಯಾದ ಬಳಕೆಯಿಂದಾಗಿ ಅಂತರ್ಜಲ ಮಟ್ಟ ತೀವ್ರವಾಗಿ ಕುಸಿದಿದೆ. ಹೀಗಾಗಿ ಪರಿಶೀಲನೆ ಮತ್ತು ಸಮತೋಲನವನ್ನು ಜಾರಿಗೆ ತರಲು, ಅಂತರ್ಜಲ ನಿರ್ದೇಶನಾಲಯ ಮತ್ತು ಕರ್ನಾಟಕ ಅಂತರ್ಜಲ ಪ್ರಾಧಿಕಾರ (GDKGA) ರಾಜ್ಯದ ಎಲ್ಲಾ ಇಲಾಖೆಗಳಿಗೆ ಮತ್ತೊಮ್ಮೆ ಸೂಚನಾ ಪತ್ರ ಕಳುಹಿಸಿದ್ದು, ನಿರ್ಮಾಣ ಚಟುವಟಿಕೆಗಳಿಗೆ ಅಂತರ್ಜಲವನ್ನು ಬಳಸಲು ‘ಆಕ್ಷೇಪಣಾ ಪ್ರಮಾಣಪತ್ರ’ ಅಥವಾ ‘ಆಕ್ಯುಪೆನ್ಸಿ ಪ್ರಮಾಣಪತ್ರ’ಕ್ಕೆ ಪ್ರಾಧಿಕಾರದ ಅನುಮತಿ ಕಡ್ಡಾಯವಾಗಿದೆ ಎಂದು ತಿಳಿಸಿದೆ.
ಅಂತರ್ಜಲವನ್ನು ಬಳಸುವ ಕಟ್ಟಡಗಳು ಮತ್ತು ಇತರ ಸಂಸ್ಥೆಗಳ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಪ್ರಾಧಿಕಾರದ ಗಮನಕ್ಕೆ ಬಂದಿದ್ದು ಇದರಲ್ಲಿ ಅನೇಕರು ಅನುಮೋದನೆ ಪಡೆಯುತ್ತಿಲ್ಲ. GDKGA ದತ್ತಾಂಶದ ಪ್ರಕಾರ, 2019 (ಪ್ರಾಧಿಕಾರ ರಚನೆಯಾದಾಗ) ರಿಂದ ಇಲ್ಲಿಯವರೆಗೆ, ಬೆಂಗಳೂರಿನಲ್ಲಿ ಕೈಗಾರಿಕೆಗಳು ಮತ್ತು ವಸತಿ ಮತ್ತು ವಾಣಿಜ್ಯ ಸಂಸ್ಥೆಗಳಿಗೆ ಮಾತ್ರ 205 NOC ಗಳನ್ನು ನೀಡಲಾಗಿದೆ.
***
ಅತ್ತ ಮೋದಿ ಎಚ್ಚರಿಕೆ ಬೆನ್ನಲ್ಲೇ ಇತ್ತ ಜಮ್ಮು-ಕಾಶ್ಮೀರದಲ್ಲಿ ಪಾಕ್ ನಿಂದ ಮತ್ತೆ ಡ್ರೋನ್ ದಾಳಿ!

ಶ್ರೀನಗರ: ದೇಶವನ್ನುದ್ದೇಶಿಸಿ ಮೋದಿ ಆಪರೇಷನ್ ಸಿಂದೂರದ ಬಗ್ಗೆ ಮಾತನಾಡುತ್ತಾ, ಪಾಕ್ ಗೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಪಾಕಿಸ್ತಾನ ಜಮ್ಮು-ಕಾಶ್ಮೀರದ ಸಾಂಬಾದಲ್ಲಿ ಡ್ರೋನ್ ದಾಳಿ ಮುಂದುವರೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಜಮ್ಮು ಮತ್ತು ಕಾಶ್ಮೀರ: ಸಾಂಬಾದಲ್ಲಿ ಕತ್ತಲೆಯಾದಾಗ ಭಾರತದ ವಾಯು ರಕ್ಷಣಾ ಪಡೆಗಳು ಪಾಕಿಸ್ತಾನಿ ಡ್ರೋನ್ಗಳನ್ನು ತಡೆಹಿಡಿಯುತ್ತಿದ್ದಂತೆ ಕೆಂಪು ಗೆರೆಗಳು ಮತ್ತು ಸ್ಫೋಟಗಳು ಕೇಳಿಬಂದವು ಎಂದು ಎಎನ್ಐ ಸೇರಿದಂತೆ ಹಲವು ರಾಷ್ಟ್ರೀಯ ಮಾಧ್ಯಮಗಳು ವರದಿ ಪ್ರಕಟಿಸಿವೆ.
***
ವಿರಾಟ್ ಕೊಹ್ಲಿ ಬೆನ್ನಲ್ಲೇ ಜಸ್ಪ್ರೀತ್ ಬುಮ್ರಾ ಶಾಕ್: BCCI ‘ಮಂಡೆ’ ಬಿಸಿ!

ಭಾರತ ಕ್ರಿಕೆಟ್ ತಂಡ ಮುಂದಿನ ತಿಂಗಳು ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದ್ದು, ಅಲ್ಲಿ ಆತಿಥೇಯ ತಂಡದ ವಿರುದ್ಧ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಈ ಪ್ರವಾಸಕ್ಕೂ ಮೊದಲೇ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದರು. ರೋಹಿತ್ ನಿವೃತ್ತಿಯಿಂದಾಗಿ ಇಂಗ್ಲೆಂಡ್ ಪ್ರವಾಸಕ್ಕೆ ಬಿಸಿಸಿಐ ಹೊಸ ಟೆಸ್ಟ್ ನಾಯಕನನ್ನು ಆಯ್ಕೆ ಮಾಡಬೇಕಾಗುತ್ತದೆ.
ಹೊಸ ನಾಯಕನ ಹೆಸರು ಮತ್ತು ತಂಡದ ಆಯ್ಕೆಯ ಬಗ್ಗೆ ಚರ್ಚಿಸಲು ಭಾರತೀಯ ಆಯ್ಕೆದಾರರು ಮುಂದಿನ ವಾರ ಸಭೆ ನಡೆಸಲಿದ್ದಾರೆ. ಸ್ಕೈ ಸ್ಪೋರ್ಟ್ಸ್ ವರದಿಯ ಪ್ರಕಾರ, ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಮುಂದಿನ ಟೆಸ್ಟ್ ನಾಯಕನಾಗಲು ನಿರಾಕರಿಸಿದ್ದಾರೆ. ಅತಿಯಾದ ಆಟದ ಒತ್ತಡದಿಂದಾಗಿ ಬೂಮ್ ಬೂಮ್ ಬುಮ್ರಾ ಸರಣಿಯ ಐದು ಟೆಸ್ಟ್ ಪಂದ್ಯಗಳನ್ನು ಆಡಲು ಬಯಸಿಲ್ಲ
ಸರಣಿಯ ಐದು ಪಂದ್ಯಗಳನ್ನು ಆಡಬಲ್ಲ ಆಟಗಾರನಿಗೆ ಭಾರತೀಯ ಆಯ್ಕೆದಾರರು ಆದ್ಯತೆ ನೀಡಲಿದ್ದಾರೆ. ಶುಭಮನ್ ಗಿಲ್ ಅಥವಾ ರಿಷಭ್ ಪಂತ್ ಅವರನ್ನು ಈಗ ಟೆಸ್ಟ್ ತಂಡದ ನಾಯಕರನ್ನಾಗಿ ಮಾಡಬಹುದು. ಅಲ್ಲದೆ, ಈ ಇಬ್ಬರಲ್ಲಿ ಒಬ್ಬರನ್ನು ಇಂಗ್ಲೆಂಡ್ ಪ್ರವಾಸಕ್ಕಾಗಿ ಭಾರತದ ಟೆಸ್ಟ್ ತಂಡದ ಉಪನಾಯಕನನ್ನಾಗಿ ನೇಮಿಸಬಹುದು. ಇಂಗ್ಲೆಂಡ್ ಪ್ರವಾಸಕ್ಕಾಗಿ ಭಾರತ ತಂಡವನ್ನು ಮೇ 24 ರೊಳಗೆ ಘೋಷಿಸುವ ನಿರೀಕ್ಷೆಯಿದೆ.
***

