24-36 ಗಂಟೆಯಲ್ಲಿ ಭಾರತದಿಂದ ದಾಳಿ ನಡೆಯಬಹುದು ಎಂದ ಪಾಕ್ ಸಚಿವ

ಭಾರತವು ಮುಂದಿನ 24-36 ಗಂಟೆಗಳಲ್ಲಿ ಪಾಕಿಸ್ತಾನದ ಮೇಲೆ ದಾಳಿ ನಡೆಸಬಹುದು ಎಂದು ಪಾಕ್ ಸಚಿವ ಅತ್ತಾವುಲ್ಲಾ ತರಾರ್ ಹೇಳಿದ್ದಾರೆ.ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರ ದಾಳಿಯಲ್ಲಿ 26 ಅಮಾಯಕರು ಪ್ರಾಣ ಕಳೆದುಕೊಂಡಿದ್ದರು. ಲಷ್ಕರ್-ಎ-ತೊಯ್ಬಾದ ಟಿಆರ್ಎಫ್ ಈ ದಾಳಿ ಹೊಣೆಯನ್ನು ಹೊತ್ತುಕೊಂಡಿತ್ತು. ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ನಮ್ಮ ಡೆಬ್ಸೈಟ್ ಯಾರೋ ಹ್ಯಾಕ್ ಮಾಡಿದ್ದಾರೆ, ನಾವು ಈ ದಾಳಿ ನಡೆಸಿಲ್ಲ ಎಂದು ಹೇಳಿಕೆ ನೀಡಿತ್ತು.
***
Pahalgam terror attack: ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ಬೆನ್ನಲ್ಲೇ ಪಾಕ್’ಗೆ ಶುರುವಾಯ್ತು ನಡುಕ, ‘ಮುಂದಿನ 24-36 ಗಂಟೆಗಳಲ್ಲಿ ಭಾರತ ಕ್ರಮ ಸಾಧ್ಯತೆ’

ಇಸ್ಲಾಮಾಬಾದ್: ಪಹಲ್ಗಾಮ್ ಉಗ್ರರ ದಾಳಿ ಬೆನ್ನಲ್ಲೇ ಭಾರತೀ ಸೇನಾಪಡೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದು, ಈ ಬೆಳವಣಿಗೆ ಪಾಕಿಸ್ತಾನಕ್ಕೆ ಆತಂಕ ಶುರುವಾಗುವಂತೆ ಮಾಡಿದೆ.
ಮೋದಿ ನಿರ್ಧಾರ ಬೆನ್ನಲ್ಲೇ ಭಾರತವು ಮುಂದಿನ 24 ರಿಂದ 36 ಗಂಟೆಗಳಲ್ಲಿ ತನ್ನ ವಿರುದ್ಧ ಮಿಲಿಟರಿ ಕ್ರಮ ಕೈಗೊಳ್ಳಲು ಯೋಜಿಸುತ್ತಿದೆ ಎಂದು ಪಾಕ್ ಸಚಿವ ಸಚಿವ ಅತ್ತೌಲ್ಲಾ ತರಾರ್ ಎಚ್ಚರಿಕೆ ನೀಡಿದ್ದಾರೆ.
ಕಳೆದ ವಾರ ನಾಗರಿಕರ ಮೇಲೆ ನಡೆದ ಉಗ್ರಗಾಮಿ ದಾಳಿಯನ್ನು ಮುಂದಿನ ಮಿಲಿಟರಿ ಕ್ರಮಕ್ಕೆ “ನೆಪ”ವಾಗಿ ಬಳಸಲು ಭಾರತ ಉದ್ದೇಶಿಸಿದೆ ಎಂದು ಪಾಕಿಸ್ತಾನದ ಮಾಹಿತಿ ಸಚಿವ ಅತ್ತೌಲ್ಲಾ ತರಾರ್ ಹೇಳಿದ್ದಾರೆ.
****
ಸತತ 6 ದಿನವೂ ಪಾಕ್ ಕದನ ವಿರಾಮ ಉಲ್ಲಂಘನೆ; LOCಯಲ್ಲಿ ಅಪ್ರಚೋದಿತ ಗುಂಡಿನ ದಾಳಿ, ಸೇನೆ ದಿಟ್ಟ ಉತ್ತರ


ಜಮ್ಮು: ಜಮ್ಮು ಮತ್ತು ಕಾಶ್ಮೀರದ ನಾಲ್ಕು ಜಿಲ್ಲೆಗಳ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಮತ್ತು ಅಂತರರಾಷ್ಟ್ರೀಯ ಗಡಿ (ಐಬಿ) ಉದ್ದಕ್ಕೂ ಅನೇಕ ವಲಯಗಳಲ್ಲಿ ಪಾಕಿಸ್ತಾನಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿ, ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಭಾರತೀಯ ಸೇನೆ ದಿಟ್ಟ ಉತ್ತರ ನೀಡುತ್ತಿದೆ ಎಂದು ಬುಧವಾರ ತಿಳಿದುಬಂದಿದೆ.
ಜಮ್ಮುವಿನ ಅಂತರಾಷ್ಟ್ರೀ ಗಡಿ ನಿಯಂತ್ರಣ ರೇಖೆ, ಪರ್ಗ್ವಾಲ್ ವಲಯ ಮತ್ತು ರಾಜೌರಿ ಜಿಲ್ಲೆಯ ಸುಂದರ್ಬನಿ ಮತ್ತು ನೌಶೇರಾ ವಲಯಗಳಲ್ಲಿ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಎಂದು ಸೇನಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
***
BBMP ಆಸ್ತಿ ತೆರಿಗೆ ಶೇ.5 ರಿಯಾಯಿತಿ ಅವಧಿ ಮೇ 31ರವರೆಗೆ ವಿಸ್ತರಣೆ

ಬೆಂಗಳೂರು: 2025-26ನೇ ಸಾಲಿನ ಆಸ್ತಿ ತೆರಿಗೆಯನ್ನು ಪೂರ್ಣವಾಗಿ ಪಾವತಿಸಲು ಶೇ.5ರಷ್ಟು ರಿಯಾಯಿತಿ ಅವಧಿಯನ್ನು ಮೇ 31ರವರೆಗೆ ವಿಸ್ತರಿಸಲಾಗಿದೆ.
ಆಸ್ತಿ ಮಾಲೀಕರು ಏಪ್ರಿಲ್ 30ರೊಳಗೆ ಪೂರ್ಣ ತೆರಿಗೆ ಪಾವತಿಸಿ ಶೇಕಡಾ 5 ರಷ್ಟು ರಿಯಾಯಿತಿ ಪಡೆಯಲು ಅವಕಾಶ ಕಲ್ಪಿಸಲಾಗಿತ್ತು. ಶೇಕಡಾ 5 ರಷ್ಟು ರಿಯಾಯಿತಿ ಸೌಲಭ್ಯ ಪಡೆಯಲು ಒಂದು ದಿನವಷ್ಟೇ ಬಾಕಿ ಇದೆ. ಹೀಗಾಗಿ, ರಿಯಾಯಿತಿ ಅವಧಿಯನ್ನು ಮೇ 31 ವರೆಗೆ ವಿಸ್ತರಿಸಲಾಗಿದೆ.ಈ ಸಂಬಂಧ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಆದೇಶ ಹೊರಡಿಸಿದ್ದಾರೆ.
*****
ಬೈಕ್ ಟ್ಯಾಕ್ಸಿ ಸೇವೆ ಜೂನ್ 15ರ ವರೆಗೆ ವಿಸ್ತರಣೆ: ನಿಟ್ಟಿಸಿರು ಬಿಟ್ಟ ಸವಾರರು..!
ಬೆಂಗಳೂರು: ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲು ಟ್ಯಾಕ್ಸಿ ಸಂಸ್ಥೆಗಳಿಗೆ ನೀಡಿದ್ದ ಗಡುವನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ಮತ್ತೆ ಆರು ವಾರಗಳವರೆಗೆ ವಿಸ್ತರಿಸಿದೆ.
ಸಮಯ ವಿಸ್ತರಣೆ ಕೋರಿ ಟ್ಯಾಕ್ಸಿ ಸಂಸ್ಥೆಗಳು ಸಲ್ಲಿಸಿದ್ಜ ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ ಎಂ ಶ್ಯಾಮ್ ಪ್ರಸಾದ್ ಅವರಿದ್ದ ಪೀಠ ಈ ಆದೇಶ ಹೊರಡಿಸಿದೆ.
ಏಪ್ರಿಲ್ 2 ರಂದು, ಓಲಾ, ಉಬರ್ ಮತ್ತು ರ್ಯಾಪಿಡೊಗಳಿಗೆ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲು ಹೈಕೋರ್ಟ್ ಆರು ವಾರಗಳ ಕಾಲಾವಕಾಶ ನೀಡಿತ್ತು.

