ಶುಭೋದಯ
ಕ್ಷಮಿಸುವುದು ಉತ್ತಮ
ಮರೆತುಬಿಡುವುದು ಸರ್ವೋತ್ತಮ.
— ರಾಬರ್ಟ್ ಬ್ರೌನಿಂಗ್ .
******************************************************************************
1.ಶಾಸಕರ ನಂತರ ಸಂಸದರ ವೇತನವೂ ಹೆಚ್ಚಳ; ಏಪ್ರಿಲ್ 1, 2023 ರಿಂದಲೇ ಪೂರ್ವಾನ್ವಯ
ನವದೆಹಲಿ: ಇತ್ತ ರಾಜ್ಯದಲ್ಲಿ ಮುಖ್ಯಮಂತ್ರಿ, ಸಚಿವರು, ಶಾಸಕರ ವೇತನ ಹಾಗೂ ಭತ್ಯೆಯಲ್ಲಿ ಶೇ. 100 ಹೆಚ್ಚಳ ಮಾಡಿದ ಬೆನ್ನಲ್ಲೇ ಅತ್ತ ಸಂಸದರ ವೇತನವೂ ಭಾರಿ ಹೆಚ್ಚವಾಗಿದ್ದು, ಏಪ್ರಿಲ್ 1, 2023 ರಿಂದ ಪೂರ್ವಾನ್ವಯವಾಗುಂತೆ ಜಾರಿಗೆ ಬರುವಂತೆ ಕೇಂದ್ರ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ. ಸಂಸದೀಯ ವ್ಯವಹಾರಗಳ ಸಚಿವಾಲಯ ಹೊರಡಿಸಿದ ಅಧಿಸೂಚನೆಯಲ್ಲಿ, ಹಾಲಿ ಸಂಸದರ ವೇತನವನ್ನು ಶೇ. 24 ರಷ್ಟು ಹೆಚ್ಚಿಸಲಾಗಿದೆ. ಅಲ್ಲದೆ ದಿನಭತ್ಯೆ ಮತ್ತು ಐದು ವರ್ಷಗಳಿಗಿಂತ ಹೆಚ್ಚಿನ ಸೇವೆ ಸಲ್ಲಿಸಿದ ಸಂಸದರಿಗೆ ಪ್ರತಿ ವರ್ಷದ ಪಿಂಚಣಿ ಮತ್ತು ಹೆಚ್ಚುವರಿ ಪಿಂಚಣಿಯನ್ನು ಹೆಚ್ಚಿಸಲಾಗಿದೆ. ಸಂಸತ್ತಿನ ಸದಸ್ಯರು ಈಗ ತಿಂಗಳಿಗೆ 1 ಲಕ್ಷ ರೂ. ಪಡೆಯುತ್ತಿದ್ದು, ಇನ್ನು ಮುಂದೆ ತಿಂಗಳಿಗೆ 1.24 ಲಕ್ಷ ರೂ. ವೇತನ ಪಡೆಯಲಿದ್ದಾರೆ. ಅವರು ಹಿಂದೆ ಪಡೆಯುತ್ತಿದ್ದ ದಿನಭತ್ಯೆಯನ್ನು ಸಹ 2,000 ರೂ.ಗಳಿಂದ 2,500 ರೂ.ಗಳಿಗೆ ಹೆಚ್ಚಿಸಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಮಾಜಿ ಸಂಸತ್ ಸದಸ್ಯರಿಗೆ ಪಿಂಚಣಿಯನ್ನು ತಿಂಗಳಿಗೆ 25,000 ರೂ.ಗಳಿಂದ 31,000 ರೂ.ಗಳಿಗೆ ಹೆಚ್ಚಿಸಲಾಗಿದೆ.
***********************************************************************
2.ನ್ಯಾಯಮೂರ್ತಿ ಯಶವಂತ್ ವರ್ಮಾ ವರ್ಗಾವಣೆ; ನಾಳೆ ಅಲಹಾಬಾದ್ ಹೈಕೋರ್ಟ್ ವಕೀಲರಿಂದ ಮುಷ್ಕರ
ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ವಾಪಸಾತಿಯನ್ನು ವಿರೋಧಿಸಿ ಅಲಹಾಬಾದ್ ಹೈಕೋರ್ಟ್ ವಕೀಲರ ಸಂಘವು ಈ ಹಿಂದೆ ಅವರ ವರ್ಗಾವಣೆಯನ್ನು ವಿರೋಧಿಸಿತ್ತು. ಅಲಹಾಬಾದ್ ಹೈಕೋರ್ಟ್ “ಕಸದ ಬುಟ್ಟಿ” ಅಲ್ಲ ಎಂದು ಪ್ರತಿಪಾದಿಸಿತ್ತು. ಆದರೆ, ಇಂದು ಸುಪ್ರೀಂ ಕೋರ್ಟ್ ಕೊಲಿಜಿಯಂ ಯಶವಂತ್ ವರ್ಮಾ ಅವರನ್ನು ಅಲಹಾಬಾದ್ ಹೈಕೋರ್ಟ್ಗೆ ವರ್ಗಾವಣೆ ಮಾಡಲು ಶಿಫಾರಸು ಮಾಡಿದೆ. ಈ ಹಿನ್ನೆಲೆಯಲ್ಲಿ ಅಲಹಾಬಾದ್ ಹೈಕೋರ್ಟ್ ಬಾರ್ ಅಸೋಸಿಯೇಷನ್ ನಾಳೆ (ಮಾರ್ಚ್ 25) ಮುಷ್ಕರಕ್ಕೆ ಕರೆ ನೀಡಿದೆ.

*****************************************************************************
3.ಗೃಹಲಕ್ಷ್ಮೀಯರಿಗೆ ಗುಡ್ನ್ಯೂಸ್: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ…!
ಬೆಳಗಾವಿ: ಗೃಹಲಕ್ಷ್ಮಿ ಯೋಜನೆಯ ಎರಡು ಕಂತಿನ ಹಣ ಬಿಡುಗಡೆಗಾಗಿ ಮಹಿಳಾ ಫಲಾನುಭವಿಗಳು ಕಾಯುತ್ತಿದ್ದಾರೆ. ಈಗಾಗಲೇ ಗೃಹ ಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ತಡವಾದ ಹಿನ್ನೆಲೆಯಲ್ಲಿ ವಿಪಕ್ಷ ನಾಯಕರು ಹಾಗೂ ರಾಜ್ಯದ ಮಹಿಳೆಯರು ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದ್ದರು. ಇದೀಗ 16 ಕಂತಿನ ಹಣವನ್ನ ಬಿಡುಗಡೆ ಮಾಡಿದ್ದು, ಇನ್ನೂ ಜನವರಿ ಹಾಗೂ ಫೆಬ್ರವರಿ ತಿಂಗಳ ಗೃಹ ಲಕ್ಷ್ಮಿ ಹಣ ಒಂದೇ ಸಲಕ್ಕೆ ಹಾಕಲಾಗುತ್ತದೆ. ಈ ಬಗ್ಗೆ ಸ್ವತಃ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ. ಮಾರ್ಚ್ 31ರ ನಂತರ ಎರಡು ತಿಂಗಳ ಹಣವನ್ನು ಒಂದೇ ಸಲಕ್ಕೆ ಹಾಕುವುದಾಗಿ ಹೇಳಿದ್ದಾರೆ.

***********************************************************************
4.ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಮೈಸೂರು: ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆ ಕಾಲ ಕೂಡಿಬಂದಂತಿದೆ. ಈ ವರ್ಷದಲ್ಲೇ ಕರ್ನಾಟಕದ ಐದು ಮಹಾ ನಗರ ಪಾಲಿಕೆಗೆ ಚುನಾವಣೆ ನಡೆಸುತ್ತೇವೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ ಎಸ್ ಸಂಗ್ರೇಶಿ ಮಾಹಿತಿ ನೀಡಿದ್ದಾರೆ. ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಮೀಸಲಾತಿ ಪಟ್ಟಿ ಕೊಟ್ಟರೆ ಸರಿ ಕೊಡದೆ ಇದ್ದರೆ ಹೈಕೋರ್ಟ್ ಮೊರೆ ಹೋಗಿ ಹಳೆ ಮೀಸಲಾತಿಯಂತೆ ಈ ವವರ್ಷವೇ ಚುನಾವಣೆ ಮಾಡುತ್ತೇವೆ. ಆದಷ್ಟು ಬೇಗ ಮಹಾನಗರ ಪಾಲಿಕೆಗಳ ಮೀಸಲಾತಿ ಕೊಡುವಂತೆ ಸರ್ಕಾರಕ್ಕೆ ಪತ್ರ ಕೂಡ ಬರೆದಿದ್ದೇವೆ. ಐದು ಮಹಾ ನಗರ ಪಾಲಿಕೆಯಲ್ಲೂ ಮತದಾರರ ಪಟ್ಟಿ ಸಿದ್ದವಾಗಿದೆ. ಈ ವರ್ಷದಲ್ಲಿ ಮಹಾನಗರ ಪಾಲಿಕೆ ಚುನಾವಣೆ ಮಾಡಲು ಚುನಾವಣಾ ಆಯೋಗ ಸಿದ್ಧವಾಗಿದೆ. ಮೈಸೂರು, ಶಿವಮೊಗ್ಗ, ದಾವಣಗೆರೆ, ತುಮಕೂರು, ಮಂಗಳೂರು ಐದು ಮಹಾ ನಗರ ಪಾಲಿಕೆಗಳ ಚುನಾವಣೆಗೆ ಸಿದ್ಧತೆ ನಡೆದಿದೆ ಎಂದರು.

************************************************************************
5.ರಾಜ್ಯದ ಜಿಲ್ಲಾ ನ್ಯಾಯಾಲಯಗಳ ಬಾರ್ ಸಂಸ್ಥೆಗಳಲ್ಲಿ ಮಹಿಳಾ ವಕೀಲರಿಗೆ ಮೀಸಲಾತಿ ನೀಡಲು ಸುಪ್ರೀಂ ಕೋರ್ಟ್ ಆದೇಶ
ನವದೆಹಲಿ: ಕರ್ನಾಟಕದ ಜಿಲ್ಲಾ ನ್ಯಾಯಾಲಯಗಳ ಬಾರ್ ಸಂಸ್ಥೆಗಳ ಮಂಡಳಿಯ ಕಾರ್ಯಕಾರಿ ಸಮಿತಿಯಲ್ಲಿ ಶೇ. 30 ರಷ್ಟು ಸ್ಥಾನಗಳೊಂದಿಗೆ ಖಜಾಂಚಿ ಹುದ್ದೆಯನ್ನು ಮಹಿಳೆಯರಿಗೆ ಮೀಸಲಿರಿಸಿ ಸುಪ್ರೀಂ ಕೋರ್ಟ್ ಸೋಮವಾರ ಆದೇಶ ಪ್ರಕಟಿಸಿದೆ. ಬೆಂಗಳೂರಿನ ವಕೀಲರ ಸಂಘದ ಪ್ರಕರಣದಲ್ಲಿ ಹೊರಡಿಸಲಾದ ನಿರ್ದೇಶನವು ಕರ್ನಾಟಕದ ಜಿಲ್ಲಾ ನ್ಯಾಯಾಲಯಗಳ ಪ್ರಕರಣದಂತೆಯೇ ಅನ್ವಯಿಸುತ್ತದೆ ಎಂದು ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಎನ್. ಕೋಟೀಶ್ವರ್ ಸಿಂಗ್ ಅವರ ಪೀಠ ಹೇಳಿದೆ.

*****************************************************************************


[…] ********************************************************************** 2.ಮಾರ್ನಿಂಗ್ ಕ್ವಿಕ್ ನ್ಯೂಸ್ ಟೈಮ್ https://vicharavisthara.com/morning-quick-news-time-25-03-2025/ […]