1.ಖಾಲಿ ಮಾಡುವುದೊಂದೇ ನಿಮಗೂ ಕಾಶ್ಮೀರಕ್ಕೂ ಇರುವ ಸಂಬಂಧ’: ಪಾಕ್ ಸೇನಾ ಮುಖ್ಯಸ್ಥರ ಹೇಳಿಕೆಗೆ ಭಾರತ ಖಡಕ್ ತಿರುಗೇಟು!
ನವದೆಹಲಿ: ಭಾರತ, ಭಾರತೀಯ ಸೈನಿಕರು ಮತ್ತು ಹಿಂದೂ ಧರ್ಮದ ಕುರಿತು ಟೀಕೆ ಮಾಡಿದ್ದ ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಮುನೀರ್ ಗೆ ತಿರುಗೇಟು ನೀಡಿರುವ ಭಾರತೀಯ ವಿದೇಶಾಂಗ ಇಲಾಖೆ, ‘ಖಾಲಿ ಮಾಡುವುದೊಂದೇ ನಿಮಗೂ ಕಾಶ್ಮೀರಕ್ಕೂ ಇರುವ ಸಂಬಂಧ’ ಎಂದು ಖಡಕ್ ತಿರುಗೇಟು ನೀಡಿದೆ.
ಕಾಶ್ಮೀರ ಇಸ್ಲಾಮಾಬಾದ್ನ “ಕಣ್ಣಿನ ರಕ್ತನಾಳ” ಎಂದು ಹೇಳಿಕೊಂಡ ಪಾಕಿಸ್ತಾನಿ ಸೇನಾ ಮುಖ್ಯಸ್ಥರ ಹೇಳಿಕೆಯನ್ನು ಭಾರತ ತಳ್ಳಿಹಾಕಿದ್ದು, ಪಾಕಿಸ್ತಾನದ “ಕಾಶ್ಮೀರದೊಂದಿಗಿನ ಏಕೈಕ ಸಂಬಂಧ” ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಪ್ರದೇಶವನ್ನು ಖಾಲಿ ಮಾಡುವುದು ಮಾತ್ರವೇ ಎಂದು ವಿದೇಶಾಂಗ ಸಚಿವಾಲಯ (MEA) ತನ್ನ ಹೇಳಿಕೆಯಲ್ಲಿ ತಿಳಿಸಿದೆ.
*****
2.ಜಾತಿ ಗಣತಿ ವರದಿ ಬಗ್ಗೆ ಯಾವುದೇ ತೀರ್ಮಾನ ಇಲ್ಲ; ಮುಂದಿನ ಸಚಿವ ಸಂಪುಟದಲ್ಲಿ ವಿಸ್ತೃತ ಚರ್ಚೆ

ಬೆಂಗಳೂರು: ಜಾತಿ ಗಣತಿ(ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ) ವರದಿ ರಾಜ್ಯದಲ್ಲಿ ವಿವಾದದ ಕಿಡಿ ಹೊತ್ತಿಸಿದ್ದು, ಈ ಕುರಿತು ಚರ್ಚಿಸಲು ಗುರುವಾರ ಕರೆಯಲಾಗಿದ್ದ ವಿಶೇಷ ಸಚಿವ ಸಂಪುಟವು ಯಾವುದೇ ಪ್ರಮುಖ ನಿರ್ಧಾರವಿಲ್ಲದೆ ಮುಕ್ತಾಯಗೊಂಡಿದೆ.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ, ಜಾತಿ ಗಣತಿ ವರದಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಸಲಾಗುವುದು. ಅದಕ್ಕು ಮುನ್ನ ಲಿಖಿತವಾಗಿ ಅಥವಾ ಮೌಖಿಕವಾಗಿ ತಮ್ಮ ಅಭಿಪ್ರಾಯವನ್ನು ತಿಳಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರಿಗೆ ಕೇಳಿಕೊಂಡಿದ್ದಾರೆ ಎಂದು ಹೇಳಿದರು.
****
3.ಹಿಂದೂಗಳಂತೆ ಮುಸ್ಲಿಮರಲ್ಲಿ 93 ಜಾತಿ, ಉಪ ಜಾತಿಗಳಿವೆ: ಹಿಂದುಳಿದ ವರ್ಗಗಳ ಆಯೋಗದ ಮುಖ್ಯಸ್ಥ!

ಬೆಂಗಳೂರು: ಹಿಂದೂಗಳಂತೆ ಮುಸ್ಲಿಮರಲ್ಲಿ 93 ಜಾತಿ, ಉಪಜಾತಿಗಳು ಜಾತಿ ಸಮೀಕ್ಷೆ ವೇಳೆ ಕಂಡುಬಂದಿರುವುದಾಗಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಗುರುವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಸ್ಲಿಮರ ಮನವಿಯ ಮೇಲೆ ಅವುಗಳನ್ನೆಲ್ಲ ಪರಿಶೀಲಿಸಿ ನಾವು ತೀರ್ಮಾನ ತಗೊಂಡಿದ್ದೇವೆ ಎಂದರು.
ಮುಸ್ಲಿಮರ ಉಪಜಾತಿಗಳನ್ನು ಒಂದೇ ಕಡೆ ತೋರಿಸಲಾಗಿದೆ. ಹಿಂದೂಗಳನ್ನು ಬೇರೆ ಬೇರೆ ತೋರಿಸಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಮುಸ್ಲಿಮರನ್ನು ಒಂದೇ ಕಡೆಯಲ್ಲಿ ಸೇರಿಸಿದ್ದೇವೆ. ಆದಾಗ್ಯೂ, ಕೆಲವು ಬೇರೆ ಬೇರೆಯೂ ಇವೆ. ಕೆಲವರನ್ನು ಅಲೆಮಾರಿಯಲ್ಲೂ ಸೇರಿಸಲಾಗಿದೆ. ಈಗ ಪಿಂಜಾರ, ಪಿಂಜಾರ ಜಪ್ಪರ್ ಇವರೆಲ್ಲ ಇದ್ದಾರೆ ಎಂದು ಹೇಳಿದರು.
****
4.384 ಗೆಜೆಟೆಡ್ ಪ್ರೊಬೇಷನರಿ ಹುದ್ದೆ: KAS ಮುಖ್ಯ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ ಸಿ) ಗ್ರೂಪ್ ‘ಎ’ ಮತ್ತು ಗ್ರೂಪ್ ‘ಬಿ’ ವೃಂದದ 384 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ನೇಮಕಾತಿಗೆ ಮುಖ್ಯ ಪರೀಕ್ಷೆಯ ವೇಳಾಪಟ್ಟಿಯನ್ನು ಗುರುವಾರ ಪ್ರಕಟಿಸಿದೆ.
ಕೆಎಎಸ್ ಮುಖ್ಯ ಪರೀಕ್ಷೆಯನ್ನು ಮೇ 3, 5, 7 ಮತ್ತು 9ರಂದು ನಡೆಸಲು ಕೆಪಿಎಸ್ಸಿ ನಿರ್ಧರಿಸಿದೆ.
ಅರ್ಹತಾ ಪರೀಕ್ಷೆ ಕನ್ನಡ ಮೇ 3 ರಂದು ಬೆಳಗ್ಗೆ 10 ರಿಂದ 12 ಗಂಟೆಯವರೆಗೆ ಮತ್ತು ಇಂಗ್ಲಿಷ್ ಪರೀಕ್ಷೆ ಅದೇ ದಿನ ಮಧ್ಯಾಹ್ನ 2 ರಿಂದ 4 ಗಂಟೆಯವರೆಗೆ ನಡೆಯಲಿದೆ.
****
5.ಯತ್ನಾಳ್ ತವರಲ್ಲಿ ವಿಜಯೇಂದ್ರ ಶಕ್ತಿ ಪ್ರದರ್ಶನ: ಬೆಲೆ ಏರಿಕೆ ಕುರಿತು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ
ವಿಜಯಪುರ: ಬಿಜೆಪಿಯ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ತವರು ಕ್ಷೇತ್ರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಗುರುವಾರ ಶಕ್ತಿ ಪ್ರದರ್ಶನ ಮಾಡಿದ್ದು, ಬೆಲೆ ಏರಿಕೆ ಕುರಿತು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಗುರುವಾರ ವಿಜಯಪುರದಲ್ಲಿ ಪಕ್ಷದ ಜನಕ್ರೋಶ ಯಾತ್ರೆಯಲ್ಲಿ ಭಾಗವಹಿಸುವ ಮೊದಲು ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಭರವಸೆಯ ಮೇರೆಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಹಣವನ್ನು ಬೇರೆಡೆಗೆ ತಿರುಗಿಸಿದ್ದು, ಅಗತ್ಯ ವಸ್ತುಗಳ ಬೆಲೆಗಳನ್ನು ಹೆಚ್ಚಿಸುವತ್ತ ಗಮನಹರಿಸುತ್ತಿದೆ ಎಂದು ಕಿಡಿಕಾರಿದರು.
*****
6.Survey: ‘10% ತಪ್ಪಾಗಿರಬಹುದು.. ನಾಯಿ ಇರುವ ಮನೆಯಲ್ಲಿ ಜಾತಿ ಗಣತಿ ಮಾಡೋಕೆ ಆಗಿಲ್ಲ’- ಕಾಂಗ್ರೆಸ್ ನಾಯಕ HM Revanna

ಬೆಂಗಳೂರು: ಕರ್ನಾಟಕದಲ್ಲಿ ವ್ಯಾಪಕ ಪರ-ವಿರೋಧ ಚರ್ಚೆಗೆ ಗ್ರಾಸವಾಗಿರುವ ಜಾತಿಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಹೆಚ್ ರೇವಣ್ಣ ಸಮರ್ಥನೆ ನೀಡಿದ್ದು, ‘ಶೇ.10% ರಷ್ಟು ತಪ್ಪಾಗಿರಬಹುದು.. ನಾಯಿ ಇರುವ ಮನೆಯಲ್ಲಿ ಜಾತಿ ಗಣತಿ ಮಾಡೋಕೆ ಆಗಿಲ್ಲ’ ಎಂದು ಹೇಳಿದ್ದಾರೆ.
ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಜಾತಿಗಣತಿ ವರದಿ(Karnataka caste census report) ಕರ್ನಾಟಕದಲ್ಲಿ ಹೊಸ ಬಿರುಗಾಳಿಯನ್ನೇ ಸೃಷ್ಟಿಸಿದ್ದು, ಕರ್ನಾಟಕ ಸರ್ಕಾರದ ಜಾತಿ ಗಣತಿ ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷದಲ್ಲಿಯೇ ಪರ-ವಿರೋಧ ಚರ್ಚೆಗಳನ್ನು ಹುಟ್ಟುಹಾಕಿದೆ.


[…] ಮಾರ್ನಿಂಗ್ ಟೈಮ್ ಕ್ವಿಕ್ ನ್ಯೂಸ್ […]