1.ಶಿಕ್ಷಣದಲ್ಲಿ ಜಾತಿ ತಾರತಮ್ಯ ತಡೆಗೆ ರಾಜ್ಯ ಸರ್ಕಾರ ಕ್ರಮ: ‘ರೋಹಿತ್ ವೇಮುಲ ಕಾಯ್ದೆ’ ಶೀಘ್ರದಲ್ಲೇ ಜಾರಿ

ಬೆಂಗಳೂರು: ಶಿಕ್ಷಣದಲ್ಲಿ ಜಾತಿ ತಾರತಮ್ಯ ತಡೆಯಲು ರಾಜ್ಯ ಸರ್ಕಾರ ಮುಂದಾಗಿದ್ದು, ‘ರೋಹಿತ್ ವೇಮುಲ ಕಾಯ್ದೆ’ಯ ಜಾರಿಗೆ ತರಲು ಚಿಂತನೆ ನಡೆಸುತ್ತಿದೆ.
ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೊಬ್ಬರೂ ಜಾತಿ ಆಧಾರದಲ್ಲಿ ತಾರತಮ್ಯ ಎದುರಿಸಬಾರದು. ಇದನ್ನು ಖಾತ್ರಿಪಡಿಸುವುದಕ್ಕಾಗಿ ʼರೋಹಿತ್ ವೇಮುಲಾ ಕಾಯ್ದೆʼ ಹೆಸರಿನ ಕಾನೂನನ್ನು ಕರ್ನಾಟಕದಲ್ಲೂ ರೂಪಿಸುವಂತೆ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಪತ್ರದ ಮೂಲಕ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒತ್ತಾಯಿಸಿದ್ದರು.
ಇದಕ್ಕೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ಅವರು, ರಾಹುಲ್ ಗಾಂಧಿಯವರೇ ನಿಮ್ಮ ಸಹಾನುಭೂತಿಯ ಪತ್ರ ಮತ್ತು ನ್ಯಾಯಕ್ಕಾಗಿ ಅಚಲ ಧ್ವನಿಗೆ ಧನ್ಯವಾದಗಳು. ಜಾತಿ, ವರ್ಗ ಅಥವಾ ಗುರುತಿನ ಹೆಸರಿನಲ್ಲಿ ಯಾವುದೇ ವಿದ್ಯಾರ್ಥಿ ಎಂದಿಗೂ ತಾರತಮ್ಯ ಅಥವಾ ಬಹಿಷ್ಕಾರವನ್ನು ಎದುರಿಸದಂತೆ ನೋಡಿಕೊಳ್ಳಲು ನಮ್ಮ ಸರಕಾರ ಬದ್ಧ ಎಂದು ಹೇಳಿದ್ದಾರೆ.
****
2.IPL 2025: ಆಹಾರ ಸುರಕ್ಷತೆಗೆ ಹೆಚ್ಚಿನ ಆದ್ಯತೆ, ಚಿನ್ನಸ್ವಾಮಿ ಕ್ರೀಡಾಂಗಣದ ಮಳಿಗೆಗಳಲ್ಲಿ FDA ತಪಾಸಣೆ
ಬೆಂಗಳೂರು: ಐಪಿಎಲ್ ಪಂದ್ಯಗಳು ನಡೆಯುತ್ತಿದ್ದು, ಈ ನಡುವೆ ಆಹಾರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುತ್ತಿರುವ ರಾಜ್ಯ ಸರ್ಕಾರ ಪಂದ್ಯಾವಳಿ ನಡೆಯುವ ಚಿನ್ನಸ್ವಾಮಿ ಕ್ರೀಡಾಂಗಣದೊಳಗಿನ ಆಹಾರ ಮಳಿಗೆಗಳಲ್ಲಿ ಶುಕ್ರವಾರ ತಪಾಸಣೆ ನಡೆಸಿದೆ.
ಮಳಿಗೆಗಳಿಗೆ ಭೇಟಿ ನೀಡಿರುವ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (ಎಫ್ಡಿಎ) ಇಲಾಖೆಯ ಅಧಿಕಾರಿಗಳು ಪ್ರಸಿದ್ಧ ಬ್ರ್ಯಾಂಡ್ಗಳು ಸೇರಿದಂತೆ ಮಳಿಗೆಗಳಲ್ಲಿನ ಎಲ್ವಾ ರೀತಿಯ ಆಬಾರ ಮಾದರಿಗಳನ್ನು ಸಂಗ್ರಹಿಸಿವೆ. ಪರೀಕ್ಷೆ ವೇಳೆ ನೈರ್ಮಲ್ಯ ಮಾನದಂಡಗಳನ್ನು ಉಲ್ಲಂಘಿಸಿರುವುದು ಕಂಡುಬಂದಿದ್ದೇ ಆದರೆ, ದಂಡ ವಿಧಿಸಲಿದ್ದಾರೆ.
****
3.ಈಶಾನ್ಯ ದೆಹಲಿಯ ಮುಸ್ತಫಾಬಾದ್ ನಲ್ಲಿ ಕಟ್ಟಡ ಕುಸಿತ: ಸಾವಿನ ಸಂಖ್ಯೆ 11ಕ್ಕೆ ಏರಿಕೆ

ನವದೆಹಲಿ: ಈಶಾನ್ಯ ದೆಹಲಿಯ ಶಕ್ತಿ ವಿಹಾರ್ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ ಬಹುಮಹಡಿ ವಸತಿ ಕಟ್ಟಡವೊಂದು ಕುಸಿದು ಬಿದ್ದಿದ್ದು, ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ ಮತ್ತು 11 ಜನ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ರಾಷ್ಟ್ರ ರಾಜಧಾನಿಯ ಮುಸ್ತಫಾಬಾದ್ ಪ್ರದೇಶದಲ್ಲಿ 20 ವರ್ಷ ಹಳೆಯ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್ಡಿಆರ್ಎಫ್), ಅಗ್ನಿಶಾಮಕ ದಳ, ದೆಹಲಿ ಪೊಲೀಸರು ಮತ್ತು ಇತರ ಸ್ವಯಂಸೇವಕರ ತಂಡಗಳು 12 ಗಂಟೆಗಳಿಗೂ ಹೆಚ್ಚು ಕಾಲ ರಕ್ಷಣಾ ಕಾರ್ಯಾಚರಣೆ ನಡೆಸಿವೆ.
****
4.BMIC ಯೋಜನೆ: ಏಳು ಸಚಿವರನ್ನೊಳಗೊಂಡ ಸಂಪುಟದ ಉಪ ಸಮಿತಿ ರಚನೆ

ಬೆಂಗಳೂರು: ಬೆಂಗಳೂರು- ಮೈಸೂರು ಮೂಲಸೌಕರ್ಯ ಕಾರಿಡಾರ್ ಯೋಜನೆ ಅನುಷ್ಠಾನ ಕುರಿತು ಇದುವರೆಗೂ ಆಗಿರುವ ಪ್ರಗತಿ ಹಾಗೂ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಪರಾಮರ್ಶಿಸಿ ಸೂಕ್ತ ಶಿಫಾರಸ್ಸುಗಳನ್ನು ಮಾಡಲು ಏಳು ಸಚಿವರನ್ನೊಳಗೊಂಡ ಸಚಿವ ಸಂಪುಟದ ಉಪ ಸಮಿತಿಯನ್ನು ರಚಿಸಲಾಗಿದೆ.
ಗೃಹ ಸಚಿವ ಡಾ. ಜಿ. ಪರಮೇಶ್ವರ್ ಈ ಸಮಿತಿಯ ಅಧ್ಯಕ್ಷರಾಗಿದ್ದು, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್. ಕೆ. ಪಾಟೀಲ್, ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ಕೆ. ಹೆಚ್. ಮುನಿಯಪ್ಪ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ. ಬಿ. ಪಾಟೀಲ್, ಸಮಾಜ ಕಲ್ಯಾಣ ಸಚಿವ ಡಾ. ಹೆಚ್. ಸಿ. ಮಹಾದೇವಪ್ಪ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಸಮಿತಿಯ ಸದಸ್ಯರಾಗಿದ್ದಾರೆ.
****
5.DMA ನಲ್ಲಿ 50% ಹುದ್ದೆಗಳು ಖಾಲಿ: ಲೋಕಾಯುಕ್ತ ತನಿಖೆಗೆ ಆದೇಶ

ಬೆಂಗಳೂರು: ಹುದ್ದೆಗಳನ್ನು ಭರ್ತಿ ಮಾಡಲು ಇಲಾಖೆಯೊಳಗೆ ಅರ್ಹ ವ್ಯಕ್ತಿಗಳು ಇದ್ದರೂ, ನಗರಾಭಿವೃದ್ಧಿ ಇಲಾಖೆ (UDD) ಅಡಿಯಲ್ಲಿ ಬರುವ ಪೌರಾಡಳಿತ ನಿರ್ದೇಶನಾಲಯ (DMA) ದಲ್ಲಿ ಸುಮಾರು 50% ಹುದ್ದೆಗಳನ್ನು ಭರ್ತಿ ಮಾಡದ ಕಾರಣ ರಾಜ್ಯ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿಗಳ ಆರ್ಥಿಕ ನಷ್ಟ ಉಂಟಾಗಿದೆ ಎಂದು ಕರ್ನಾಟಕ ಲೋಕಾಯುಕ್ತ ದೂರು ದಾಖಲಿಸಿದೆ.
DMA ನಲ್ಲಿ ಹುದ್ದೆಗಳನ್ನು ತೆಗೆದುಕೊಳ್ಳಲು ಅರ್ಹ ಅಧಿಕಾರಿಗಳು ಇದ್ದರೂ, ಅವರನ್ನು ಭರ್ತಿ ಮಾಡಲು ಯಾವುದೇ ಕ್ರಮಗಳನ್ನು ತೆಗೆದುಕೊಳ್ಳಲಾಗಿಲ್ಲ, ಆದರೆ ಸರ್ಕಾರ ಹುದ್ದೆಗಳಿಗಾಗಿ ಕಾಯುತ್ತಿರುವವರಿಗೆ ಪಾವತಿಸುತ್ತಿದೆ. ಇದು ಆರ್ಥಿಕ ನಷ್ಟಕ್ಕೆ ಕಾರಣವಾಗುವುದಲ್ಲದೆ, ಕೆಲಸದ ಮೇಲೂ ಪರಿಣಾಮ ಬೀರುತ್ತದೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಗುರುವಾರ ತಮ್ಮ ಕಚೇರಿಯಿಂದ ಬಿಡುಗಡೆ ಮಾಡಿದ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದ್ದಾರೆ.
****

