ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ವತಿಯಿಂದ 2025ರ NEET(UG) ಪರೀಕ್ಷೆಯು ಮೇ 4, 2025 ರಂದು ಮಧ್ಯಾಹ್ನ 2:00 ರಿಂದ ಸಂಜೆ 5:00 ಗಂಟೆಯವರೆಗೆ ಕರ್ನಾಟಕ ರಾಜ್ಯದಾದ್ಯಂತ 381 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಈ ಪರೀಕ್ಷೆಗೆ ಒಟ್ಟು 1,49,000 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ.
ವಿದ್ಯಾರ್ಥಿಗಳಿಗೆ ಬೆಳಿಗ್ಗೆ 11:00 ರಿಂದ ಮಧ್ಯಾಹ್ನ 1:30 ಗಂಟೆಯವರೆಗೆ ಪರೀಕ್ಷಾ ಕೇಂದ್ರಕ್ಕೆ ಪ್ರವೇಶಕ್ಕೆ ಅವಕಾಶವಿರುತ್ತದೆ.
ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಕಡ್ಡಾಯವಾಗಿ ಈ ಕೆಳಗಿನ ದಾಖಲೆಗಳನ್ನು ತೆಗೆದುಕೊಂಡು ಹಾಜರಾಗಬೇಕು:
ಪ್ರವೇಶಾತಿ ಪತ್ರ
ಕಾಲೇಜಿನಿಂದ ನೀಡಲಾದ ಐಡಿ ಕಾರ್ಡ್ ಅಥವಾ ಆಧಾರ್ ಕಾರ್ಡ್, ಪಾನ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ವೋಟರ್ ಐಡಿ ಅಥವಾ ಇತರೆ ಅಂಗೀಕೃತ ಗುರುತಿನ ಚೀಟಿ
ಒಂದು ಪೋಸ್ಟ್ ಕಾರ್ಡ್ ಗಾತ್ರದ ಫೋಟೋ
ಎರಡು ಪಾಸ್ಪೋರ್ಟ್ ಗಾತ್ರದ ಫೋಟೋಗಳು
ಬೆಳಿಗ್ಗೆ 11:00 ಗಂಟೆಯಿಂದ NTA ವತಿಯಿಂದ ನೇಮಕಗೊಂಡ ಏಜೆನ್ಸಿಗಳು ರಿಜಿಸ್ಟ್ರೇಷನ್ ಪ್ರಕ್ರಿಯೆಯನ್ನು ಪ್ರಾರಂಭಿಸಲಿವೆ. ನಿಯೋಜಿತ ಪೊಲೀಸ್ ಸಿಬ್ಬಂದಿಗಳು ವಿದ್ಯಾರ್ಥಿಗಳ ಸುರಕ್ಷತಾ ತಪಾಸಣೆಯನ್ನು (Frisking) ನಡೆಸಲಿದ್ದಾರೆ. ಎಲ್ಲಾ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯವಾಗಿದೆ. ವಿದ್ಯಾರ್ಥಿಗಳು ಪ್ರವೇಶಾತಿ ಪತ್ರದಲ್ಲಿ ನೀಡಲಾದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.
ವಿದ್ಯಾರ್ಥಿಗಳು ಈ ಕೆಳಗಿನ ವಸ್ತುಗಳನ್ನು ಧರಿಸುವಂತಿಲ್ಲ ಅಥವಾ ತರಬಾರದು:
ಪೂರ್ಣ ತೋಳಿನ ಮೇಲಂಗಿ
ದೊಡ್ಡ ಬಟನ್ಗಳಿರುವ ಶರ್ಟ್/ಪ್ಯಾಂಟ್
ಶೂ, ಸಾಕ್ಸ್, ಎತ್ತರದ ಚಪ್ಪಲಿಗಳು
ಕಿವಿಯೋಲೆ, ಬಳೆ, ಸರ, ಕಾಲ್ಗೆಜ್ಜೆ, ಮೂಗುತಿ, ಜಡೆ ಕ್ಲಿಪ್
ಯಾವುದೇ ಲೋಹದ ಉಪಕರಣಗಳು
ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳು
ರಿಜಿಸ್ಟ್ರೇಷನ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ಸಂಖ್ಯೆ ಇರುವ ಕೊಠಡಿಗೆ ನೇರವಾಗಿ ತೆರಳಬೇಕು.
ಪರೀಕ್ಷೆಯು ಮಧ್ಯಾಹ್ನ 2:00 ರಿಂದ ಸಂಜೆ 5:00 ಗಂಟೆಯವರೆಗೆ ನಡೆಯಲಿದೆ. ಪರೀಕ್ಷಾ ಅವಧಿಯಲ್ಲಿ ಪ್ರತಿ ಗಂಟೆಗೊಮ್ಮೆ ಬೆಲ್ ಮೂಲಕ ಸೂಚನೆ ನೀಡಲಾಗುವುದು.
ಪರೀಕ್ಷಾ ಕೇಂದ್ರಗಳಲ್ಲಿ ಈ ಕೆಳಗಿನ ವ್ಯವಸ್ಥೆಗಳನ್ನು ಮಾಡಲಾಗಿದೆ:
ನಿರಂತರ ವಿದ್ಯುತ್ ಸಂಪರ್ಕ
ಆರೋಗ್ಯ ಸಿಬ್ಬಂದಿ ಮತ್ತು ತುರ್ತು ಸೇವೆಗಳು
ಪರೀಕ್ಷಾ ಕೇಂದ್ರಗಳ ಸ್ವಚ್ಛತೆ
ದಿವ್ಯಾಂಗ ಮತ್ತು ವಿಶೇಷ ಚೇತನ ವಿದ್ಯಾರ್ಥಿಗಳಿಗೆ ವೀಲ್ಚೇರ್ ವ್ಯವಸ್ಥೆ
ತುರ್ತು ಅಗ್ನಿಶಾಮಕ ವ್ಯವಸ್ಥೆ
NTA ವತಿಯಿಂದ Frisking ಮತ್ತು JAMMER ಅಳವಡಿಕೆಗಾಗಿ ಏಜೆನ್ಸಿಗಳನ್ನು ನಿಯೋಜಿಸಲಾಗಿದೆ. ಪರೀಕ್ಷಾ ಕೇಂದ್ರದ ಮುಖ್ಯಸ್ಥರು JAMMER ಅಳವಡಿಕೆ ಮತ್ತು Frisking ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಬೇಕು. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ವಿದ್ಯಾರ್ಥಿಗಳನ್ನು ಸೂಕ್ತ ತಪಾಸಣೆಗೆ ಒಳಪಡಿಸಲಾಗುವುದು.
ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಿಯೋಜಿತ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಹೊರತುಪಡಿಸಿ ಯಾವುದೇ ಸಾರ್ವಜನಿಕರಿಗೆ ಪರೀಕ್ಷಾ ಕೇಂದ್ರಗಳಿಗೆ ಪ್ರವೇಶವಿರುವುದಿಲ್ಲ ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಪ್ರಕಟಣೆ ತಿಳಿಸಿದೆ.
ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2025ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ಸಿನಿಮಾ, ಕ್ರೀಡೆ ಸೇರಿದಂತೆ ಎಲ್ಲ ವಿಭಾಗದ ಸುದ್ದಿಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ, ಡಿಪ್ಲೋಮಾ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಆಸಕ್ತಿಯಿದೆ.
