ಹಾಸನ: ಸರ್ವೋಚ್ಛ ನ್ಯಾಯಾಲಯದ ತೀರ್ಪಿನ ಆಧಾರದ ಮೇಲೆ ತಕ್ಷಣವೇ ಪರಿಶಿಷ್ಟ ಜಾತಿಯವರಿಗೆ ಒಳ ಮೀಸಲಾತಿ ಮಾಡುವಂತೆ ಆಗ್ರಹಿಸಿ ಬರುವ ಆ.1ರಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ಶಾಂತಿಯುತ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ವಿ.ಆರ್.ಪ್ರಕಾಶ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರೀಂ ತೀರ್ಪಿನ ಆಧಾರದ ಮೇಲೆ ರಾಜ್ಯದಲ್ಲಿ ಕೂಡಲೇ ಒಳ ಮೀಸಲಾತಿ ಜಾರಿಗೊಳಿಸ ಬೇಕೆಂಬುದು ನಮ್ಮ ಬಹುಕಾಲದ ಬೇಡಿಕೆ.
ಈ ಕುರಿತು ನಮ್ಮ ಸಮುದಾಯದ ಬೇಡಿಕೆಗಳನ್ನು ತಮ್ಮ ಮೂಲಕ ಸರ್ಕಾರಕ್ಕೆ ತಲುಪಿಸಲು ಆ.1ರಂದು ಬೆಳಿಗ್ಗೆ 11 ಗಂಟೆಗೆ ನಗರದ ಹೇಮಾವತಿ ಪ್ರತಿಮೆಯಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆ ನಡೆಸಿ ನಂತರ ಶಾಂತಿಯುತ ಪ್ರತಿಭಟನೆ ಮಾಡಲಾಗುವುದು ಎಂದರು.
ನಮ್ಮ ಪ್ರತಿಭಟನೆ ಸಂಪೂರ್ಣ ಶಾಂತಿಯುತ ಮತ್ತು ಸಂವಿಧಾನ ಬದ್ಧವಾಗಿರುತ್ತದೆ. ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ರೀತಿಯ ಧಕ್ಕೆ ಬಾರದಂತೆ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಗದಂತೆ ನಾವು ಸಂಪೂರ್ಣ ಜವಾಬ್ದಾರಿ ವಹಿಸುತ್ತೇವೆ.
ಅಲ್ಲದೆ, ಪೆÇಲೀಸ್ ಇಲಾಖೆಯೊಂದಿಗೆ ಸಂಪೂರ್ಣ ಸಹಕಾರ ನೀಡಿ, ಅವರ ಮಾರ್ಗದರ್ಶನದಂತೆ ಪ್ರತಿಭಟನೆ ನಡೆಸಲು ನಾವು ಬದ್ಧರಾಗಿದ್ದೇವೆ. ಶಾಂತಿಯುತ ಪ್ರತಿಭಟನೆ ಮತ್ತು ಮನವಿ ಸಲ್ಲಿಕೆಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಲೋಕೇಶ್, ಲಿಂಗರಾಜು, ಮೂಡಲಯ್ಯ, ಶೇಖರಪ್ಪ ಇದ್ದರು.

[…] […]