ನವದೆಹಲಿ: ಸಂಸತ್ತಿನಲ್ಲಿ ಅಂಗೀಕರಿಸಲಾದ ವಕ್ಫ್ (ತಿದ್ದುಪಡಿ) ಮಸೂದೆ, 2025ರ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಶೀಘ್ರದಲ್ಲೇ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲಾಗುವುದು ಎಂದು ಕಾಂಗ್ರೆಸ್ ಶುಕ್ರವಾರ ಹೇಳಿದೆ.
ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ‘ವಕ್ಫ್ (ತಿದ್ದುಪಡಿ) ಮಸೂದೆ, 2025 ರ ಸಾಂವಿಧಾನಿಕತೆಯನ್ನು ಶೀಘ್ರದಲ್ಲೇ ಕಾಂಗ್ರೆಸ್ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನೆ ಮಾಡಲಿದೆ’ ಎಂದು ಹೇಳಿದ್ದಾರೆ.

