ಮೈಸೂರು: ದಸರಾ ಜಂಬೂಸವಾರಿ ವರದಿಗೆ ತೆರಳಿದ್ದ ಪತ್ರಕರ್ತರ ಕರ್ತವ್ಯಕ್ಕೆ ಅಡ್ಡಿಪಡಿಸಿ, ದುರ್ವರ್ತನೆ ತೋರಿದ ಪೊಲೀಸರ ಕ್ರಮವನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ತೀವ್ರವಾಗಿ ಖಂಡಿಸಿದೆ.
ಪತ್ರಕರ್ತರ ಕರ್ತವ್ಯಕ್ಕೆ ಅಡ್ಡಿಪಡಿಸಿದ ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಆಗ್ರಹಿಸಿದ್ದಾರೆ.

ಸಾರ್ವಜನಿಕರಿಗೆ ಮಾಹಿತಿ ತಲುಪಿಸುವ ಕರ್ತವ್ಯ ನಿರ್ವಹಿಸುವ ಪತ್ರಕರ್ತರಿಗೆ ಸೂಕ್ತ ವಾತಾವರಣ ಕಲ್ಪಿಸಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂಬುದು ಸಂಘದ ಒತ್ತಾಯವಾಗಿದೆ.
