ರೇವ್ ಪಾರ್ಟಿ ಮೇಲೆ ಪೊಲೀಸರ ದಾಳಿ: 30ಕ್ಕೂ ಹೆಚ್ಚು ಯುವಕ-ಯುವತಿಯರು ನಶೆ ಸ್ಥಿತಿಯಲ್ಲಿ ಪತ್ತೆ!

ದೇವನಹಳ್ಳಿ ತಾಲೂಕಿನ ಕನ್ನಮಂಗಲದಲ್ಲಿ ರೇವ್ ಪಾರ್ಟಿ ನಡೆಯುತ್ತಿದ್ದ ಫಾರ್ಮ್ ಹೌಸ್ ಮೇಲೆ ಪೋಲೀಸರು ದಾಳಿ ನಡೆಸಿ, 30ಕ್ಕೂ ಹೆಚ್ಚು ಯುವಕರನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳದಲ್ಲಿ ಕೊಕೇನ್, ಹೈಡ್ರೋ ಡ್ರಗ್ಸ್ ಮತ್ತು ಗಾಂಜಾ ಪತ್ತೆಯಾಗಿದೆ. ದಾಳಿ ಎಸಿಪಿ ನವೀನ್ ನೇತೃತ್ವದಲ್ಲಿ ನಡೆದಿದೆ.