ಬೆಂಗಳೂರು: ಅಂಚೆ ಇಲಾಖೆಯ ಬ್ರಾಂಚ್ ಪೋಸ್ಟ್ ಮಾಸ್ಟರ್ (BPM) ಮತ್ತು ಗ್ರಾಮೀಣ ಡಾಕ್ ಸೇವಕ್ (GDS) ಸೇರಿದಂತೆ ಒಟ್ಟು 28,740 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಡಾಕ್ಯುಮೆಂಟ್ ಪರಿಶೀಲನೆಗೆ ಅರ್ಹರಾದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಲಾಗಿದೆ.
2026 ಫೆಬ್ರವರಿಯಲ್ಲಿ ಅರ್ಜಿ ಆಹ್ವಾನಿಸಲಾಗಿದ್ದ ಈ ನೇಮಕಾತಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಏಪ್ರಿಲ್ 27ರೊಳಗೆ ತಮ್ಮ ಹೆಸರಿನ ಮುಂದೆ ಸೂಚಿಸಿರುವ ಡಿವಿಷನಲ್ ಕಚೇರಿಯಲ್ಲಿ ಡಾಕ್ಯುಮೆಂಟ್ ಪರಿಶೀಲನೆಗೆ ಹಾಜರಾಗಬೇಕು ಎಂದು ಇಲಾಖೆ ಸೂಚಿಸಿದೆ.
ಅಗತ್ಯ ದಾಖಲೆಗಳು
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ನೀಡಿದ್ದ ಎಲ್ಲಾ ಮೂಲ ದಾಖಲೆಗಳ ಜೊತೆಗೆ, ಅವುಗಳ ಎರಡು ಸೆಟ್ ಸ್ವಯಂ ಪ್ರಮಾಣೀಕೃತ (Self-attested) ಝೆರಾಕ್ಸ್ ಪ್ರತಿಗಳನ್ನು ಕಡ್ಡಾಯವಾಗಿ ಕೊಂಡೊಯ್ಯಬೇಕು.
ಪರೀಕ್ಷೆ ಇಲ್ಲದೇ ನೇಮಕಾತಿ
ಈ ನೇಮಕಾತಿಯಲ್ಲಿ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. SSLC (ದಶಮ ತರಗತಿ)ಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ನೇರವಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತಿದೆ.
ಅಭ್ಯರ್ಥಿಗಳಿಗೆ ಸೂಚನೆ
ಅರ್ಹ ಅಭ್ಯರ್ಥಿಗಳು ನಿಗದಿತ ಅವಧಿಯೊಳಗೆ ಡಾಕ್ಯುಮೆಂಟ್ ಪರಿಶೀಲನೆ ಪೂರ್ಣಗೊಳಿಸುವುದು ಅಗತ್ಯವಾಗಿದೆ. ಸಮಯಕ್ಕೆ ಹಾಜರಾಗದಿದ್ದರೆ ಅವಕಾಶ ಕಳೆದುಕೊಳ್ಳುವ ಸಾಧ್ಯತೆ ಇದೆ.
