ಹಾಸನ, ಜು. 4: ರಾಷ್ಟ್ರೀಯ ಅಂಚೆ ನೌಕರರ ದಿನದ ಅಂಗವಾಗಿ ರೋಟರಿ ಕ್ಲಬ್ ಆಫ್ ಹಾಸನ್ ಸನ್ ರೈಸ್ ವತಿಯಿಂದ ಹಾಸನ ಅಂಚೆ ಇಲಾಖೆಯ ಸಿಬ್ಬಂದಿಗಳಾದ ಶ್ರೀಮತಿ ಪ್ರಜ್ವಲ ಹಾಗೂ ಶ್ರೀಮತಿ ಯಶೋಧ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ರೋಟರಿ ಕ್ಲಬ್ ಆಫ್ ಹಾಸನ್ ಸನ್ ರೈಸ್ ಅಧ್ಯಕ್ಷ ರೋ. ಕೆ.ಎಸ್. ಯೋಗೇಶ್, ಸಮಾಜಕ್ಕೆ ಅಂಚೆ ಇಲಾಖೆಯ ಸಿಬ್ಬಂದಿ ಸಲ್ಲಿಸುತ್ತಿರುವ ಸೇವೆ ಶ್ಲಾಘನೀಯವಾಗಿದ್ದು, ಅವರ ಕರ್ತವ್ಯನಿಷ್ಠೆಯನ್ನು ಗೌರವಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕ್ಲಬ್ ಕಾರ್ಯದರ್ಶಿ ರೋ. ಬಿ.ಎಂ. ದರ್ಶನ್, ಖಜಾಂಚಿ ರೋ. ಶಶಿಂದ್ರನಾಥನ್ ಎಂ.ಡಿ., ಜಂಟಿ ಕಾರ್ಯದರ್ಶಿ ರೋ. ರಾಜೇಶ್ ಸೇರಿದಂತೆ ಕ್ಲಬ್ನ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ರೋಟರಿ ಕ್ಲಬ್ ಆಫ್ ಹಾಸನ್ ಸನ್ ರೈಸ್ ವತಿಯಿಂದ ಕೃತಜ್ಞತೆ ಸಲ್ಲಿಸಲಾಯಿತು.
