ತುಮಕೂರು: ನಗರದ ಎಸ್.ಎಸ್.ಪುರಂನಲ್ಲಿರುವ ಶ್ರೀ ಉಮಾಮಹೇಶ್ವರ ದೇವಾಲಯದಲ್ಲಿ ಕಳೆದ 20 ವರ್ಷಗಳಿಂದ ಮಹಾಶಿವರಾತ್ರಿ ಪ್ರಯುಕ್ತ ಸಾವಿರಾರು ಭಕ್ತರಿಗೆ ರಾಜ್ ಕುಮಾರ್ ಗುಪ್ತ ಕುಟುಂಬದವರು ಪ್ರಸಾದ ವಿತರಣೆ ಮಾಡುವ ಪರಂಪರೆಯನ್ನು ಮುಂದುವರೆಸಿದ್ದಾರೆ.
ಈ ವರ್ಷವೂ ಮಹಾಶಿವರಾತ್ರಿ ಹಬ್ಬದ ಅಂಗವಾಗಿ ದೇವಾಲಯಕ್ಕೆ ಆಗಮಿಸಿದ ಭಕ್ತಾಧಿಗಳಿಗೆ ವಿಶೇಷವಾಗಿ ಪ್ರಸಾದ ವಿತರಣೆ ಮಾಡಲಾಯಿತು. ಬೆಳಗ್ಗಿನಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಾಲಯಕ್ಕೆ ಆಗಮಿಸಿ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.

ರಾಜ್ ಕುಮಾರ್ ಗುಪ್ತ ಕುಟುಂಬದವರು ಮಾತನಾಡಿ, “ಕಳೆದ ಎರಡು ದಶಕಗಳಿಂದ ಭಕ್ತರಿಗೆ ಪ್ರಸಾದ ವಿತರಿಸುವ ಸೇವೆಯನ್ನು ಭಕ್ತಿಭಾವದಿಂದ ಮಾಡುತ್ತಿದ್ದು, ಮುಂದಿನ ವರ್ಷಗಳಲ್ಲಿಯೂ ಇದೇ ರೀತಿಯಲ್ಲಿ ಸೇವೆಯನ್ನು ಮುಂದುವರೆಸುವ ಸಂಕಲ್ಪ ನಮ್ಮದು,” ಎಂದು ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಕುಟುಂಬದ ಸದಸ್ಯರು, ಭಕ್ತರು ಹಾಗೂ ಸ್ಥಳೀಯರು ಭಾಗವಹಿಸಿ ಸೇವಾ ಕಾರ್ಯಕ್ಕೆ ಕೈಜೋಡಿಸಿದರು.
– ಕೆ.ಬಿ.ಚಂದ್ರಚೂಡ
