ಕೆ.ಆರ್.ಪೇಟೆ:ಪಟ್ಟಣದ ಹೇಮಾವತಿ ಬಡಾವಣೆಯ ನಿವಾಸಿ ಬ್ರಾಹ್ಮಣ ಸಮಾಜದ ಹಿರಿಯರಾದ ಪ್ರೇಮಲೀಲಾ ಓಂ ಮೂರ್ತಿ ಶರ್ಮ(80) ಅವರು ನಿಧನ ಹೊಂದಿರುತ್ತಾರೆ.
ಮೃತರು ಐವರು ಹೆಣ್ಣು ಮಕ್ಕಳು, ಮೊಮ್ಮಕ್ಕಳು, ಮರಿಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆಯು ಮಾ.01ರಂದು ಭಾನುವಾರ ಮಧ್ಯಾಹ್ನ ಅನುವಿನಕಟ್ಟೆಯ ಕೆರೆಕೋಡಿ ಬಳಿ ಇರುವ ಬ್ರಾಹ್ಮಣರ ಸ್ಮಶಾನದಲ್ಲಿ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ. ಮೃತರ ನಿಧನಕ್ಕೆ ತಾಲ್ಲೂಕು ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಅರವಿಂದ್ ಕಾರಂತ್ ಹಾಗೂ ಎಲ್ಲಾ ಪದಾಧಿಕಾರಿಗಳು ಸೇರಿದಂತೆ ವಿವಿಧ ಗಣ್ಯರು ಸಂತಾಪ ಸೂಚಿಸಿದ್ದಾರೆ.
– ಶ್ರೀನಿವಾಸ್ ಆರ್.
