ಬೆಂಗಳೂರು, ಜುಲೈ 18: ರಾಜ್ಯಾದ್ಯಂತ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸಲು ಸಿದ್ಧತೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವಿಧಾನಸೌಧದಲ್ಲಿ ಪೂರ್ವಭಾವಿ ಸಭೆ ನಡೆಸಿದರು.
ಸಭೆಯಲ್ಲಿ ಎರಡೂ ಇಲಾಖೆಗಳ ಯೋಜನೆಗಳ ಸಿಂಧುರಣೆಯ ಕುರಿತು ಚರ್ಚೆಯು ನಡೆಯಿತು. ಅಂಗನವಾಡಿಗಳಲ್ಲಿ ‘ಚಿಲಿಪಿಲಿ 2.0’ ಪಠ್ಯಕ್ರಮವನ್ನು ಆಳವಡಿಸುವ ಬಗ್ಗೆ ತೀರ್ಮಾನವಾಗಿದ್ದು, ಈಗಾಗಲೇ ಶಿಕ್ಷಣ ಇಲಾಖೆಯ ಪೂರ್ವ ಪ್ರಾಥಮಿಕ ತರಗತಿಗಳಿಗೆ ಸೇರಿದ ಮಕ್ಕಳಿಗೆ ಪೂರಕ ಪೌಷ್ಠಿಕ ಆಹಾರ ನೀಡುವ ಉದ್ದೇಶವನ್ನೂ ಸಭೆಯಲ್ಲಿ ಹಂಚಿಕೊಳ್ಳಲಾಯಿತು. ಮಕ್ಕಳ ತೂಕ, ಅಳತೆಗಳ ನಿಖರ ದಾಖಲೆಯತ್ತ ಗಮನಹರಿಸುವ ಅಗತ್ಯವಿದೆ ಎಂಬ ವಿಷಯವೂ ಮುನ್ನೋಟವಾಗಿ ಚರ್ಚೆಗೆ ಲಭ್ಯವಾಯಿತು.
ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ರಶ್ಮಿ ಮಹೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ. ಶಾಮ್ಲಾ ಇಕ್ಬಾಲ್, ಸಚಿವರ ಆಪ್ತ ಕಾರ್ಯದರ್ಶಿಗಳಾದ ಡಾ. ಟಿ.ಎಚ್. ವಿಶ್ವನಾಥ್, ಕಿಶೋರ್ ಕುಮಾರ್ ಹಾಗೂ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್. ನಿಶ್ಚಲ್ ಸೇರಿದಂತೆ ಅನೇಕ ಅಧಿಕಾರಿಗಳು ಭಾಗವಹಿಸಿದ್ದರು.

[…] ಇದನ್ನು ಓದಿ: ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿ… […]