ರಾಮನಾಥಪುರ/ಕುಕ್ಕೆ ಸುಬ್ರಹ್ಮಣ್ಯ, ಆ. 6: ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀಗಳನ್ನು ರಾಮನಾಥಪುರ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಾಲಯದ ಅರ್ಚಕರಾದ ಗುಂಡಣ್ಣ, ವೆಂಕಟಚಲ ಅಯ್ಯಂಗಾರ್ ಹಾಗೂ ವೇ. ಪ್ರಸನ್ನ ಅವರು ಭೇಟಿ ಮಾಡಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ಜಿಲ್ಲಾ ಅಧ್ಯಕ್ಷ ಎಂ.ಎನ್. ಕುಮಾರಸ್ವಾಮಿ ಅವರೂ ಉಪಸ್ಥಿತರಿದ್ದು, ಮಠದ ಶ್ರೀಗಳೊಂದಿಗೆ ಧಾರ್ಮಿಕ ಹಾಗೂ ಸಾಮಾಜಿಕ ವಿಚಾರಗಳ ಕುರಿತು ಚರ್ಚೆ ನಡೆಸಿದರು.

ಭೇಟಿಯ ವೇಳೆ ಮಠದ ಶ್ರೀಗಳು ರಾಮನಾಥಪುರ ದೇವಾಲಯದ ಅರ್ಚಕರು ಹಾಗೂ ಎಂ.ಎನ್. ಕುಮಾರಸ್ವಾಮಿ ಅವರನ್ನು ಸನ್ಮಾನಿಸಿ ಗೌರವಿಸಿದರು. ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡು ಸಮಾಜದ ಒಳಿತಿಗಾಗಿ ಧಾರ್ಮಿಕ ಮತ್ತು ಸಾಮಾಜಿಕ ಸೇವಾ ಕಾರ್ಯಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮುಂದುವರಿಸುವಂತೆ ಆಶೀರ್ವದಿಸಿದರು.
– ಕುಮಾರಸ್ವಾಮಿ ಎಂ.ಎನ್.
