ಹಾಸನ: ಖಾಸಗಿ ಬಸ್ ಹಾಗೂ ಅಲ್ಟೋ ಕಾರು ನಡುವೆ ಸಂಭವಿಸಿದ ಭೀಕರ ಡಿಕ್ಕಿಯಲ್ಲಿ ಕಾರಿನಲ್ಲಿದ್ದ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃ*ತಪಟ್ಟಿದ್ದು, ಉಳಿದ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ.
ಚನ್ನರಾಯಪಟ್ಟಣ ತಾಲ್ಲೂಕಿನ ಬೀರೂರು ಗೇಟ್ ಬಳಿ ದುರ್ಘಟನೆ ನಡೆದಿದೆ. ಕೆ.ಆರ್.ಪೇಟೆ ತಾಲ್ಲೂಕಿನ ಕಾಗೇಪುರ ಗ್ರಾಮದ ಶಿವಕುಮಾರ (46) ಮೃತರು.
ಚನ್ನರಾಯಪಟ್ಟಣದಿಂದ ಮುಂಬೈಗೆ ತೆರಳುತ್ತಿದ್ದ ಕಾವೇರಿ ಖಾಸಗಿ ಬಸ್ ಹಾಗೂ ಅರಸೀಕೆರೆ ಕಡೆಯಿಂದ ಬರುತ್ತಿದ್ದ KA-19-B-5207 ನಂಬರ್ನ ಅಲ್ಟೋ ಕಾರು ನಡುವೆ ಈ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಶಿವಕುಮಾರ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.ಗಾಯಗೊಂಡ ಉಳಿದ ನಾಲ್ವರನ್ನು ಚನ್ನರಾಯಪಟ್ಟಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ಚನ್ನರಾಯಪಟ್ಟಣ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
