
ಬೇಲೂರು- ಕಾಡಾನೆ ಹಾವಳಿ ತಡೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಿಂದು ಅರೇಹಳ್ಳಿಯ ಹೊಸ ಬಸ್ ನಿಲ್ದಾಣದ ಮುಂಭಾಗ ನಡೆದ ಬೃಹತ್ ಪ್ರತಿಭಟನೆಯಲ್ಲಿ ಸಕಲೇಶಪುರ ಶಾಸಕ ಸಿಮೆಂಟ್ ಮಂಜು ರವರು ಭಾಗವಹಿಸಿ ಕಾಡಾನೆ ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಸರ್ಕಾರಕ್ಕೆ ಒತ್ತಾಯಿಸಿದರು.
ಬೇಲೂರು ತಾಲೂಕಿನ, ಅರೇಹಳ್ಳಿ ಹೋಬಳಿಯ, ಅನಿಲ್ ಎಂಬ ಯುವಕ ಕೆಲಸ ಮುಗಿಸಿ ಮನೆಗೆ ಮರಳುವ ಸಂದರ್ಭದಲ್ಲಿ ಕಾಡಾನೆ ದಾಳಿಗೆ ತುತ್ತಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಮೃತರ ಮನೆಗೆ ಮಾನ್ಯ ಶಾಸಕರು ಭೇಟಿ ನೀಡಿ, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು.