???????
ಹಾಸನ: ನಗರದಲ್ಲಿ ಗುರುವಾರ ಗುಡುಗು ಸಹಿತ ಸುರಿದ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿತ್ತು.
ಸಂಜೆ 5ಗಂಟೆಯಿಂದ ಗಂಟೆಗೂ ಹೆಚ್ಚು ಕಾಲ ಎಡೆ ಬಿಡದೆ ಸುರಿದ ಮಳೆಗೆ ವಾಹನ ಸವಾರರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಬೀದಿ ಬದಿ ವ್ಯಾಪಾರಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು.

ಹಲವೆಡೆ ರಸ್ತೆಗಳಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ಅಡಚಣೆಯಾದರೆ, ಹಲವರು ಮಳೆಯಿಂದ ರಕ್ಷಣೆ ಪಡೆಯಲು ರಸ್ತೆ ಬದಿಯ ಕಟ್ಟಡಗಳ ಆಶ್ರಯ ಪಡೆದಿದ್ದರು.
