ರಾಮನಾಥಪುರ: ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ ಮಧುರನಹಳ್ಳಿ ಮಕ್ಕಳ ಮನೆಗೆ ಶೈಕ್ಷಣಿಕ ಸಾಮಗ್ರಿಗಳು ಹಾಗೂ ಕುರ್ಚಿಗಳನ್ನು ಕೊಡುಗೆಯಾಗಿ ನೀಡಲಾಯಿತು.
ಮಧುರನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತದ 2025–26ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯ ಪ್ರಯುಕ್ತ ಸಂಘದ ಅಧ್ಯಕ್ಷ ಎಂ.ಎಸ್. ರವೀಂದ್ರ ಹಾಗೂ ನಿರ್ದೇಶಕ ಎಂ.ಪಿ. ಮಹೇಶ್ ಅವರು ಮಕ್ಕಳ ಮನೆ ಮಕ್ಕಳಿಗೆ ಎಲ್ಸಿಡಿ ಸ್ಲೇಟ್ಗಳು, ನೋಟ್ಬುಕ್ಗಳು, ಪೆನ್ಸಿಲ್, ರಬ್ಬರ್ ಸೇರಿದಂತೆ ವಿವಿಧ ಶೈಕ್ಷಣಿಕ ಸಾಮಗ್ರಿಗಳು ಹಾಗೂ ಎರಡು ಕುರ್ಚಿಗಳನ್ನು ವಿತರಿಸಿ ಮಕ್ಕಳನ್ನು ಪ್ರೋತ್ಸಾಹಿಸಿದರು.
ಕಾರ್ಯಕ್ರಮದಲ್ಲಿ ಎಚ್ಡಿಸಿಸಿ ಬ್ಯಾಂಕ್ ಹಾಗೂ ಹಾಸನ ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ಕೆ. ಸತೀಶ್, ಸಂಘದ ಉಪಾಧ್ಯಕ್ಷ ಎಲ್.ಎನ್. ಪ್ರದೀಪ್, ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ರೈತರು ಹಾಗೂ ಗ್ರಾಮೀಣ ಮಕ್ಕಳಿಗೆ ಕಾನ್ವೆಂಟ್ ಮಾದರಿಯ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಎ. ಮಂಜು ದಂಪತಿಗಳ ಮಾರ್ಗದರ್ಶನ ಹಾಗೂ ಹಿರಿಯ ವಿದ್ಯಾರ್ಥಿಗಳ ಬಳಗದ ಸಹಕಾರದಿಂದ ಮಕ್ಕಳ ಮನೆ ಶೈಕ್ಷಣಿಕ ಕಾರ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದು ಗಣ್ಯರು ಮೆಚ್ಚುಗೆ ವ್ಯಕ್ತಪಡಿಸಿದರು.

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಸಹಕಾರ ನೀಡುವುದಾಗಿ ಕೆ. ಸತೀಶ್ ಭರವಸೆ ನೀಡಿದರು.
ಮಧುರನಹಳ್ಳಿಯಲ್ಲಿ ಆರಂಭವಾಗಿರುವ ಈ ಶೈಕ್ಷಣಿಕ ಪ್ರೋತ್ಸಾಹದ ಮಾದರಿಯನ್ನು ಅರಕಲಗೂಡು ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಸರ್ಕಾರಿ ಶಾಲೆಗಳಿಗೂ ವಿಸ್ತರಿಸುವ ಅಗತ್ಯವಿದೆ. ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಸಮಾಜದ ವಿವಿಧ ಸಂಘ-ಸಂಸ್ಥೆಗಳು ಹಾಗೂ ದಾನಿಗಳು ಕೈಜೋಡಿಸಿದರೆ ಇನ್ನಷ್ಟು ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಅವಕಾಶ ಕಲ್ಪಿಸಲು ಸಾಧ್ಯವಾಗಲಿದೆ ಎಂದು ಆಶಯ ವ್ಯಕ್ತಪಡಿಸಲಾಯಿತು.
– ಕುಮಾರಸ್ವಾಮಿ ಎಂ.ಎನ್.
