ರಾಮನಾಥಪುರ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ರೈತರು ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಪಡೆದುಕೊಂಡು, ಸಕಾಲದಲ್ಲಿ ಸಾಲ ಮರುಪಾವತಿ ಮಾಡುವ ಮೂಲಕ ಸಂಘದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಹಾಸನ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿರ್ದೇಶಕ ಹೊನ್ನವಳ್ಳಿ ಸತೀಶ್ ಮನವಿ ಮಾಡಿದರು.
ರಾಮನಾಥಪುರದ ಪ್ರಸನ್ನ ಶ್ರೀ ಸುಬ್ರಹ್ಮಣ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಹಾಗೂ ಎಚ್.ಡಿ.ಸಿ.ಸಿ. ಬ್ಯಾಂಕ್, ಹಾಸನ ಇವರ ಸಹಯೋಗದಲ್ಲಿ ಆಯೋಜಿಸಿದ್ದ 2025-26ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮೀಣ ಭಾಗದ ರೈತರಿಗೆ ಆರ್ಥಿಕ ನೆರವು ನೀಡುವಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಪ್ರಮುಖ ಪಾತ್ರ ವಹಿಸುತ್ತಿವೆ. ರೈತರು ಸಂಘದ ಸಾಲ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು ಕೃಷಿ ಚಟುವಟಿಕೆಗಳಿಗೆ ಬಳಸಿಕೊಳ್ಳಬೇಕು. ಪಡೆದ ಸಾಲವನ್ನು ನಿಗದಿತ ಅವಧಿಯಲ್ಲಿ ಮರುಪಾವತಿಸುವ ಮೂಲಕ ಸಂಘದ ಆರ್ಥಿಕ ಸದೃಢತೆಗೆ ಸಹಕರಿಸಬೇಕು ಎಂದು ಹೇಳಿದರು.
ರಾಮನಾಥಪುರದ ಸಹಕಾರ ಸಂಘವು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವುದಕ್ಕೆ ಸಂಘದ ಅಧ್ಯಕ್ಷರು, ಆಡಳಿತ ಮಂಡಳಿ ಹಾಗೂ ಸಿಬ್ಬಂದಿಯನ್ನು ಅಭಿನಂದಿಸಿದರು.

ಸಂಘದ ಅಧ್ಯಕ್ಷ ಎಂ.ಈ. ತಿಮ್ಮೇಗೌಡ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಕೆ. ವೇಣುಗೋಪಾಲ್, ಉಪಾಧ್ಯಕ್ಷ ಎಂ.ಆರ್. ಸತೀಶ್, ನಿರ್ದೇಶಕರಾದ ಜಿ.ಎಸ್. ಯೋಗೇಗೌಡ, ಸಿ. ಮಧುಕರ, ಎಚ್.ವಿ. ನಾರಾಯಣ, ಎಂ.ಎಚ್. ಚಿಕ್ಕೇಗೌಡ, ಎಸ್.ಕೆ. ಮಧು, ಜಯಂತಿ, ವಿಜಯಲಕ್ಷ್ಮಿ, ಗಣೇಶ್, ವೆಂಕಟೇಶ್, ಎಂ.ಬಿ. ದೇವರಾಜಪ್ಪ, ಬಸವರಾಜು ಸೇರಿದಂತೆ ಸಂಘದ ಸದಸ್ಯರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
– ಕುಮಾರಸ್ವಾಮಿ ಎಂ.ಎನ್.
