ರಾಮನಾಥಪುರ, ಆ.5: ಅರಕಲಗೂಡು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದೊಡ್ಡಮಗ್ಗೆ, ರಾಮನಾಥಪುರ, ಕೊಣನೂರು, ಕೇರಳಾಪುರ ಹಾಗೂ ಸಾಲಿಗ್ರಾಮ ಹೋಬಳಿಗಳ ನೂರಾರು ಹಳ್ಳಿಗಳ ರೈತರು ಮತ್ತು ಗ್ರಾಮೀಣ ಜನರ ಹಿತದೃಷ್ಟಿಯಿಂದ ಹಾರಂಗಿ ಜಲಾಶಯದ ನಾಲೆಗಳಿಗೆ ನೀರು ಹರಿಸುವ ಕಾರ್ಯಕ್ಕೆ ಮಾಜಿ ಸಚಿವ ಹಾಗೂ ಶಾಸಕ ಎ. ಮಂಜು ಚಾಲನೆ ನೀಡಿದರು.
ಹಾರಂಗಿ ಜಲಾಶಯದ ಎಡದಂಡೆ ಮತ್ತು ಬಲದಂಡೆ ನಾಲೆಗಳಿಗೆ ನೀರು ಹರಿಸಿ ಮಾತನಾಡಿದ ಅವರು, ಪ್ರಸ್ತುತ ಕೃಷಿ ಬಳಕೆಗೆ ಅಲ್ಲದೆ, ಕೆರೆ-ಕಟ್ಟೆಗಳನ್ನು ತುಂಬಿಸುವುದು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ನೀರು ಬಿಡಲಾಗುತ್ತಿದೆ ಎಂದು ತಿಳಿಸಿದರು.

ಈ ಭಾಗದ ಹಲವು ಗ್ರಾಮಗಳಲ್ಲಿ ನೀರಿನ ಅಭಾವ ಉಂಟಾಗಿರುವ ಹಿನ್ನೆಲೆಯಲ್ಲಿ ಕೆರೆ-ಕಟ್ಟೆಗಳಿಗೆ ನೀರು ತಲುಪಿಸುವುದು ಅಗತ್ಯವಾಗಿದೆ. ನಾಲೆಗಳ ಮೂಲಕ ನೀರು ಹರಿಸುವುದರಿಂದ ಗ್ರಾಮೀಣ ಪ್ರದೇಶದ ಜನರು ಹಾಗೂ ಜಾನುವಾರುಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
– ಕುಮಾರಸ್ವಾಮಿ.ಎಂ.ಎನ್.
