ರಾಮನಾಥಪುರ: ಪಿರಿಯಾಪಟ್ಟಣ ತಾಲ್ಲೂಕಿನ ಸೂಳೆಕೋಟೆ ಗ್ರಾಮದ ಪುರೋಹಿತರಾದ ಶ್ರೀ ಕುಮಾರಸ್ವಾಮಿ ಅವರ ತಾಯಿ ಹಾಗೂ ದಿವಂಗತ ಚನ್ನಬಸಪ್ಪ ಅವರ ಧರ್ಮಪತ್ನಿ ಪುಟ್ಟಮಣಿ (83) ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಿಗ್ಗೆ ಲಿಂಗೈಕ್ಯರಾದರು.
ಮೃತರು ಮೂವರು ಗಂಡು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.
ನವೆಂಬರ್ 14ರ ಶನಿವಾರ ಮಧ್ಯಾಹ್ನ 12 ಗಂಟೆಗೆ ಸೂಳೆಕೋಟೆಯಲ್ಲಿರುವ ಸ್ವಗೃಹದಲ್ಲಿ ಪೂಜಾ ಕೈಂಕರ್ಯ ನೆರವೇರಿದ ಬಳಿಕ ಅವರ ತೋಟದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.
ವಿಶ್ವ ವೀರಶೈವ ಲಿಂಗಾಯತ ಮಹಾವೇದಿಕೆಯ ರಾಜ್ಯಾಧ್ಯಕ್ಷ ಎಂ.ಎನ್. ಕುಮಾರಸ್ವಾಮಿ, ಕೊಡಗು ಜಿಲ್ಲಾ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಎಚ್.ವಿ. ಶಿವಪ್ಪ, ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮೂರ್ತಿ ಸೇರಿದಂತೆ ಹಲವು ಗಣ್ಯರು ಪುಟ್ಟಮಣಿ ಅವರ ನಿಧನಕ್ಕೆ ಸಂತಾಪ ಸೂಚಿಸಿ, ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
– ಕುಮಾರಸ್ವಾಮಿ ಎಂ.ಎನ್.
