ರಾಮನಾಥಪುರ: ಕಾವೇರಿ ನದಿ ದಂಡೆಯಲ್ಲಿರುವ ಪ್ರಸಿದ್ಧ ರಾಮನಾಥಪುರದ ಶ್ರೀ ಪ್ರಸನ್ನ ಸುಬ್ರಹ್ಮಣ್ಯಸ್ವಾಮಿ ದೇವಾಲಯದ 105ನೇ ವರ್ಷದ ಜಾತ್ರಾ ಮಹೋತ್ಸವ ಡಿಸೆಂಬರ್ 15ರಿಂದ ಜನವರಿ 14ರವರೆಗೆ ನಡೆಯಲಿದೆ.
ಜಾತ್ರಾ ಮಹೋತ್ಸವದ ಅಂಗವಾಗಿ ಜಾತ್ರೆಯ ಅಂಗಡಿಗಳ ಬಹಿರಂಗ ಹರಾಜು ನವೆಂಬರ್ 26ರ ಗುರುವಾರ ಬೆಳಿಗ್ಗೆ 11 ಗಂಟೆಗೆ ರಾಮನಾಥಪುರ ಮಹಾತ್ಮ ಗಾಂಧಿ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ನಡೆಯಲಿದೆ.
ಗ್ರಾಮ ಪಂಚಾಯಿತಿ ಉಪನಿಬಂಧನೆಗಳ ನಿಯಮಾನುಸಾರ ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಹಾಗೂ ತಹಸೀಲ್ದಾರ್ ಕೆ.ಸಿ. ಸೌಮ್ಯ ಅವರ ಅಧ್ಯಕ್ಷತೆಯಲ್ಲಿ ಹರಾಜು ಪ್ರಕ್ರಿಯೆ ಜರುಗಲಿದೆ.
ಹರಾಜಿನ ಕುರಿತು ಹೆಚ್ಚಿನ ಮಾಹಿತಿಗಾಗಿ ರಾಮನಾಥಪುರ ಗ್ರಾಮ ಪಂಚಾಯಿತಿಯನ್ನು ಸಂಪರ್ಕಿಸುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಂ.ಎನ್. ಕುಮಾರಸ್ವಾಮಿ ಹಾಗೂ ಕಾರ್ಯದರ್ಶಿ ರೇವಣ್ಣ ಮನವಿ ಮಾಡಿದ್ದಾರೆ.
– ಕುಮಾರಸ್ವಾಮಿ ಎಂ.ಎನ್.
