ರಾಮನಾಥಪುರ, ಆ.15: ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಹುತಾತ್ಮರಾದ ಸ್ವಾತಂತ್ರ್ಯ ಹೋರಾಟಗಾರರನ್ನು ಇಂದಿನ ಯುವಜನತೆ ಸ್ಮರಿಸಿ, ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹಾಗೂ ನಿವೃತ್ತ ಮುಖ್ಯ ಶಿಕ್ಷಕ ಎಚ್.ಎಸ್. ತಿರುಮಲಚಾರ್ ಹೇಳಿದರು.
ರಾಮನಾಥಪುರದ ಶ್ರೀ ಪಟ್ಟಾಭಿರಾಮ ದೇವಾಲಯದ ಮುಂಭಾಗದಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ದೇಶವು ಶಾಂತಿ, ತ್ಯಾಗ, ಬಲಿದಾನ ಹಾಗೂ ಅಹಿಂಸೆಯ ಮಾರ್ಗದ ಮೂಲಕ ಸ್ವಾತಂತ್ರ್ಯವನ್ನು ಪಡೆದಿದೆ. ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ಆದರ್ಶಗಳನ್ನು ಇಂದಿನ ಪೀಳಿಗೆ ಅರಿತು, ದೇಶದ ಏಕತೆ ಹಾಗೂ ಪ್ರಗತಿಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಮಾಜಿ ಕನ್ವಿನರ್ ಆರ್.ಎಸ್. ನರಸಿಂಹಮೂರ್ತಿ, ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಾಲಯದ ಅರ್ಚಕ ವೇ. ಅಭಿಷೇಕ್, ಶ್ರೀ ಶಿವರಾತ್ರಿ ರಾಜೇಂದ್ರ ಶ್ರೀಗಳ ಭಕ್ತ ಬಳಗದ ಜಿಲ್ಲಾಧ್ಯಕ್ಷ ಎಂ.ಎನ್. ಕುಮಾರಸ್ವಾಮಿ, ಗ್ರಾಮ ಪಂಚಾಯಿತಿ ಸದಸ್ಯೆ ಪುಷ್ಪ, ಉಪನ್ಯಾಸಕ ಗಿರೀಶ್, ಅಂಗನವಾಡಿ ಶಿಕ್ಷಕಿ ಭಾಗ್ಯಮ್ಮ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
– ಕುಮಾರಸ್ವಾಮಿ ಎಂ.ಎನ್.
