ರಾಮನಾಥಪುರ: ನಾಡಪ್ರಭು ಕೆಂಪೇಗೌಡರ 517ನೇ ಜಯಂತಿ ಆಚರಣೆ ಕಾರ್ಯಕ್ರಮವು ಜುಲೈ 19ರಂದು ರಾಮನಾಥಪುರದ ಶ್ರೀ ಪಟ್ಟಾಭಿರಾಮ ಪ್ರೌಢಶಾಲೆಯ ಆವರಣದಲ್ಲಿ ನಡೆಯಲಿದೆ ಎಂದು ಜಯಂತಿ ಆಚರಣಾ ಸಮಿತಿಯ ಸಮನ್ವಯ ಅಧ್ಯಕ್ಷ ಮಲ್ಲಿನಾಥಪುರ ಜವರೇಗೌಡ ತಿಳಿಸಿದ್ದಾರೆ.

ಅಂದು ಬೆಳಿಗ್ಗೆ ಶ್ರೀ ರಾಮೇಶ್ವರಸ್ವಾಮಿ ದೇವಾಲಯದಿಂದ ಆರಂಭವಾಗುವ ಭವ್ಯ ಮೆರವಣಿಗೆ ರಥಬೀದಿ ಮಾರ್ಗವಾಗಿ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಆಗಮಿಸಲಿದೆ. ಮೆರವಣಿಗೆಯಲ್ಲಿ ವೀರಗಾಸೆ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಲಾ ತಂಡಗಳು ಭಾಗವಹಿಸಲಿವೆ.
ಬೆಳಿಗ್ಗೆ 9 ಗಂಟೆಗೆ ಹಾಸನ ಅದಿಚುಂಚನಗಿರಿ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ನಡೆಯುವ ಜಯಂತಿ ಕಾರ್ಯಕ್ರಮದಲ್ಲಿ ಮಾಜಿ ಸಚಿವರು ಹಾಗೂ ಶಾಸಕರಾದ ಎ. ಮಂಜು, ಎಚ್.ಡಿ. ರೇವಣ್ಣ, ಮಾಜಿ ಶಾಸಕ ಎ.ಟಿ. ರಾಮಸ್ವಾಮಿ, ಲೋಕಸಭಾ ಸದಸ್ಯ ಶ್ರೇಯಸ್ ಪಟೇಲ್, ಮಾಜಿ ಸಂಸದ ಪ್ರತಾಪ್ ಸಿಂಹ, ರಾಜ್ಯಸಭಾ ಸದಸ್ಯ ಜಿ.ಸಿ. ಚಂದ್ರಶೇಖರ್, ಮುಖಂಡ ನಿಖಿಲ್ ಕುಮಾರಸ್ವಾಮಿ, ಮಡಿಕೇರಿ ಶಾಸಕ ಡಾ. ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ, ಮುಖಂಡರಾದ ಯೋಗರಮೇಶ್, ಡಾ. ಕೆ.ಎಂ. ಮೋಹನ್, ದೊಡ್ಡಮಗ್ಗೆ ಎಂ.ಟಿ. ಕೃಷ್ಣೇಗೌಡ, ಹೊಡೆನೂರು ಪಿ. ಶ್ರೀಧರಗೌಡ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಲ್ಲೇಶಗೌಡ, ನಿವೃತ್ತ ಅಧಿಕಾರಿ ನಿಂಗೇಗೌಡ, ಪ್ರಗತಿಪರ ರೈತ ಎಂ.ಸಿ. ರಂಗಸ್ವಾಮಿ, ರಾಷ್ಟ್ರೀಯ ಹಾಕಿ ಆಟಗಾರ್ತಿ ಕು. ಜೆ. ಚಂದನ ಹಾಗೂ ರಾಜ್ಯಮಟ್ಟದ ವಿಜೇತೆ ಹಂಪಾಪುರ ವರ್ಷ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ನಾಡಪ್ರಭು ಕೆಂಪೇಗೌಡ ವಕ್ಕಲಿಗರ ಸಂಘದ ಸಮನ್ವಯ ಅಧ್ಯಕ್ಷ ಮಲ್ಲಿನಾಥಪುರ ಜವರೇಗೌಡ, ಪ್ರಧಾನ ಕಾರ್ಯದರ್ಶಿ ಬಿ.ಸಿ. ಹೊನ್ನೇಗೌಡ, ಕಾರ್ಯಾಧ್ಯಕ್ಷ ಎಚ್.ಎಸ್. ಶಂಕರ್ ಹಾಗೂ ಸದಸ್ಯರಾದ ರಾಜೇಗೌಡ, ಬಸವರಾಜು, ರವಿ, ಶಿವರಾಜು ಸೇರಿದಂತೆ ಇತರರು ಉಪಸ್ಥಿತರಿದ್ದರು.
– ಎಂ.ಎನ್. ಕುಮಾರಸ್ವಾಮಿ, ರಾಮನಾಥಪುರ
