ರಾಮನಾಥಪುರ- ಸಾಲಬಾಧೆ ತಾಳಲಾರದೆ ಹೋಬಳಿಯ ಮಲ್ಲಾಪುರ ಗ್ರಾಮದ ರೈತ ಮಂಜೇಗೌಡ ಎಂಬುವವರು ಆತ್ಮಹತ್ಯೆ ಮಾಡಿಕೊಂಡಿದ್ದು, ಸಂಸದ ಶ್ರೇಯಸ್ ಎಂ.ಪಟೇಲ್ ಮಂಗಳವಾರ ಮೃತನ ಮನೆಗೆ ತೆರಳಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.
ಗುರುವಾರ ರಾತ್ರಿ ವಿಷ ಕುಡಿದಿದ್ದ ರೈತ, ಹಾಸನ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಮಂಜೇಗೌಡ ಅವರ ಮನೆಗೆ ಭೇಟಿ ನೀಡಿದ ಸಂಸದರು, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ, ಸರ್ಕಾರದ ಕಡೆಯಿಂದ ಸಿಗಬೇಕಾದ ಪರಿಹಾರ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಸ್ಥಳದಲ್ಲೇ ಸಂಬಂದ ಪಟ್ಟ ಅಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಸಂಸದರು, ಸಂಕಷ್ಟದಲ್ಲಿರುವ ಕುಟುಂಬಕ್ಕೆ ಶೀಘ್ರವೇ ಸ್ಪಂದಿಸುವಂತೆ ಸೂಚಿಸಿದರು.

[…] ರಾಮನಾಥಪುರ-ಸಾಲಬಾಧೆ ತಾಳಲಾರದೆ ರೈತರ ಆತ್ಮ… […]
[…] […]
[…] ಇದನ್ನು ಓದಿ-ರಾಮನಾಥಪುರ-ಸಾಲಬಾಧೆ ತಾಳಲಾರದ… […]