ರಾಮನಾಥಪುರ- ಪುರಾಣ ಪ್ರಸಿದ್ಧ ದೇವಾಲಯಗಳ ಬೀಡು ಎನಿಸಿರುವ ದಕ್ಷಿಣ ಕಾಶಿ ಎಂದೇ ಪ್ರಖ್ಯಾತಿ ಹೊಂದಿರುವ ರಾಮನಾಥಪುರದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವದಲ್ಲಿ ವಿವಿಧ ಭಾಗಗಳಿಂದ ಆಗಮಿಸಿದ್ದ ನೂರಾರು ಭಕ್ತರ ಸಮ್ಮುಖದಲ್ಲಿ ಇಂದು ಗುರುವಾರ ಅದ್ದೂರಿಯಾಗಿ ದೇವಾಲಯದ ಮುಖ್ಯ ಅರ್ಚಕರು ಶ್ರೀನಾಥ್ ಅವರ ಸಾನಿಧ್ಯದಲ್ಲಿ ರಥೋತ್ಸವ ನೆರವೇರಿತು.

ರಾಮನಾಥಪುರದ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಾಲಯದ ಪಕ್ಕದಲ್ಲಿರುವ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವದ ಅಂಗವಾಗಿ ದೇಗುಲವು ವಿವಿಧ ರೀತಿಯ ಹೂಗಳಿಂದ ಅಲಂಕೃತಗೊಂಡಿತ್ತು. ಹಗಲು 12 ಗಂಟೆಗೆ ಸರಿಯಾಗಿ ಪ್ರಸನ್ನ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇಗುಲದ ಮುಂಭಾಗದಲ್ಲಿ ನಿಲ್ಲಿಸಿ ವಿವಿಧ ಪುಪ್ಪಗಳಿಂದ ಹಾಗೂ ಬಗ್ಗೆ ಬಗೆಯ ವರ್ಣದ ಬಟ್ಟೆಗಳಿಂದ ಅಲಂಕರಿಸಿದ 20 ಅಡಿ ಎತ್ತರದ ರಥದಲ್ಲಿ ಉತ್ಸವ ಮೂರ್ತಿಯನ್ನು ಕುಳ್ಳಿರಿಸಿ, ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು.
ಸುತ್ತಮುತ್ತಲಿನ ವಿವಿಧ ಭಾಗಗಳಿಂದ ಬಂದಿದ್ದ ನೂರಾರು ಭಕ್ತರ ಸಮಯದಲ್ಲಿ ಮಂಗಳ ವಾಧ್ಯಗಳೊಂದಿಗೆ ಹಷ್ರೋದ್ವಾರದೊಂದಿಗೆ ಸಾಮೂಹಿಕವಾಗಿ ರಥವನ್ನು ಎಳೆಯುತ್ತಾ ದೇವಸ್ಥಾನದ ಮುಂಭಾಗದಿಂದ ರಥದ ಬೀದಿಯಲ್ಲಿ ತೆರಳಿ ಕಾವೇರಿ ನದಿ ಸೇತುವೆಯವರೆವಿಗೂ ಹಾಗೂ ಅಲ್ಲಿಂದ ಮತ್ತೆ ಸ್ವಸ್ಥಾನಕ್ಕೆ ರಥವನ್ನು ಎಳೆದು ತಂದು ನಿಲ್ಲಿಸಿದರು.
ಈ ಸಂದರ್ಭದಲ್ಲಿ ಶ್ರೀ ಸುಬ್ರಮಣ್ಯಸ್ವಾಮಿ ದೇವಾಲಯದ ಪಾರುಪತ್ತೇಗಾರ್ ರಮೇಶ್ ಭಟ್ ಹಾಗೂ ಗ್ರಾಮದ ಮುಖ್ಯಸ್ಥರು ಮುಂತಾದವರು ಉಪಸ್ಥಿತರಿದ್ದರು.
