ರಾಮನಾಥಪುರ: ಹೋಬಳಿಯ ಬಸವಪಟ್ಟಣದಲ್ಲಿ ಶರಣ ಬಿ.ಎಸ್. ಲೋಕಮಾತಮಲ್ಲಪ್ಪ ಅವರ ನೂತನ ಸ್ವಗೃಹದಲ್ಲಿ ಸೋಮವಾರ ಬೆಳಿಗ್ಗೆ ಕಾಶಿ ಪೀಠದ ಹಿರಿಯ ಜಗದ್ಗುರುಗಳ ಸಾನಿಧ್ಯದಲ್ಲಿ ವೈಭವೋಪೇತ ಸಂಗೀತಯುಕ್ತ ಇಷ್ಠಲಿಂಗ ಮಹಾಪೂಜೆ ಹಾಗೂ ಧಾರ್ಮಿಕ ಸಭೆ ನೆರವೇರಿತು.
ಉತ್ತರ ಪ್ರದೇಶದ ವಾರಣಾಸಿಯ ಶ್ರೀ ಜಗದ್ಗುರು ಕಾಶೀ ಜ್ಞಾನ ಸಿಂಹಾಸನ ಮಹಾಸಂಸ್ಥಾನ ಪೀಠ ಜಂಗಮವಾಡಿ ಮಠದ ಶ್ರೀಮದ್ ಕಾಶಿ ಜ್ಞಾನ ಸಿಂಹಾಸನಾಧೀಶ್ವರರಾದ ಶ್ರೀ 1008 ಹಿರಿಯ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ಇಷ್ಠಲಿಂಗ ಪೂಜಾ ಕಾರ್ಯಕ್ರಮ ಜರುಗಿತು.

ಈ ಸಂದರ್ಭದಲ್ಲಿ ನುಗ್ಗೆಹಳ್ಳಿ ಪುರವರ್ಗ ಹಿರೇಮಠದ ಶ್ರೀ ಡಾ. ಮಹೇಶ್ವರ ಶಿವಾಚಾರ್ಯ ಮಹಾಸ್ವಾಮೀಜಿಗಳ ನೇತೃತ್ವದಲ್ಲಿ ಯಶಳೂರು ಮಠದ ಶ್ರೀಗಳು, ವೇದಪಂಡಿತ ದಿನೇಶ ಶಾಸ್ತ್ರಿ (ಮೈಸೂರು), ಶ್ರೀ ಕೆಂಪಮ್ಮ ಹಾಗೂ ಕೊಲ್ಲಾಪುರದಮ್ಮ ಆಂಜನೇಯಸ್ವಾಮಿ ದೇವಸ್ಥಾನದ ಧರ್ಮಾಧಿಕಾರಿ ಅಭಿನಂದನ್, ಮೈಸೂರು ಆಗಮಿಕರು ಹಾಗೂ ಧಾರ್ಮಿಕ ಚಿಂತಕರು ಕೆ.ಎಸ್. ದಿನೇಶ ಶಾಸ್ತ್ರಿಗಳು ಸೇರಿದಂತೆ ಅನೇಕ ಹರಗುರು ಚರಮೂರ್ತಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜಗದ್ಗುರುಗಳ ಆಶೀರ್ವಾದ ಪಡೆದರು.
ವರದಿ: ಎಂ.ಎನ್. ಕುಮಾರಸ್ವಾಮಿ
