ರಾಮನಾಥಪುರ : – ಕೇರಳಾಪುರದ ಶ್ರೀ ಪ್ರಸನ್ನ ವೀರಭದ್ರೇಶ್ವರಸ್ವಾಮಿ ಜಾತ್ರೆಯ ಪ್ರಯುಕ್ತ ಪೂಜಾ ಕೈಂಕರ್ಯ ನಂತರ ರಥಕ್ಕೆ ಚಾಲನೆಯನ್ನು ಮಾಜಿ ಸಚಿವರು ಹಾಗೂ ಶಾಸಕರು ಎ. ಮಂಜು, ತಹಸಿಲ್ದಾರ್ ಕೆ.ಸಿ.ಸೌಮ್ಯ ಚಾಲನೆ ನೀಡಿದರು.
ರಾಮನಾಥಪುರ- ಪುರಾಣ ಪ್ರಸಿದ್ಧ ದೇವಾಲಯಗಳ ಬೀಡು ಎನಿಸಿರುವ ದಕ್ಷಿಣ ಕಾಶಿ ಎಂದೇ ಪ್ರಖ್ಯಾತಿ ಹೊಂದಿರುವ ರಾಮನಾಥಪುರ ಹೋಬಳಿ ಕೇರಳಾಪುರ ಶ್ರೀ ವೀರಭದ್ರಸ್ವಾಮಿ ರಥೋತ್ಸವದ ಅಂಗವಾಗಿ ದೇಗುಲವು ವಿವಿಧ ರೀತಿಯ ಹೂಗಳಿಂದ ಅಲಂಕೃತಗೊಂಡಿತ್ತು. ಹಗಲು 11 ಗಂಟೆಗೆ ಸರಿಯಾಗಿ ದೇಗುಲದ ಮುಂಭಾಗದಲ್ಲಿ ನಿಲ್ಲಿಸಿ ವಿವಿಧ ಪುಪ್ಪಗಳಿಂದ ಹಾಗೂ ಬಗ್ಗೆ ಬಗೆಯ ವರ್ಣದ ಬಟ್ಟೆಗಳಿಂದ ಅಲಂಕರಿಸಿದ 25 ಅಡಿ ಎತ್ತರದ ರಥದಲ್ಲಿ ಉತ್ಸವ ಮೂರ್ತಿಯನ್ನು ಕುಳ್ಳಿರಿಸಿ, ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು.

ಸುತ್ತಮುತ್ತಲಿನ ವಿವಿಧ ಭಾಗಗಳಿಂದ ಬಂದಿದ್ದ ಸಾವಿರಾರು ಭಕ್ತರ ಸಮಯದಲ್ಲಿ ಮಂಗಳ ವಾಧ್ಯಗಳೊಂದಿಗೆ ಹಷ್ರೋದ್ವಾರದೊಂದಿಗೆ ಸಾಮೂಹಿಕವಾಗಿ ರಥವನ್ನು ಎಳೆಯುತ್ತಾ ದೇವಸ್ಥಾನದ ಮುಂಭಾಗದಿಂದ ರಥದ ಬೀದಿಯಲ್ಲಿ ತೆರಳಿ ಅಲ್ಲಿಂದ ಮತ್ತೆ ಶ್ರೀ ವೀರಭದ್ರಸ್ವಾಮಿ ದೇವಾಲಯದ ಸುತ್ತ ಪ್ರದಕ್ಷಣೆ ನಂತರ ಸ್ವಸ್ಥಾನಕ್ಕೆ ರಥವನ್ನು ಎಳೆದು ತಂದು ನಿಲ್ಲಿಸಿದರು.
ವಿವಿಧ ಪೂಜೆ, ಧಾರ್ಮಿಕ ಸೇವಾ ಕಾರ್ಯಗಳು ಜರುಗಿದವು. ಮಹಾ ರಥೋತ್ಸವ ಮತ್ತು ಮಹಾಮಂಗಳಾರತಿ ನಂತರ ಬಂದಂತಹ ಸಾವಿರಾರು ಭಕ್ತರು ಪ್ರಸಾದದ ವ್ಯವಸ್ಥೆಯನ್ನು ದೇವಾಲಯದ ಸಮಿತಿಯವರು ವ್ಯವಸ್ಥೆ ಮಾಡಿದ್ದರು.
ಕೇರಳಾಪುರದ ಶ್ರೀ ಪ್ರಸನ್ನ ವೀರಭದ್ರೇಶ್ವರಸ್ವಾಮಿ ಮಹಾ ರಥೋತ್ಸವ ಸಂಭ್ರಮದಿಂದ ನಡೆದ ಜಾತ್ರೆಯ ಪ್ರಯುಕ್ತ ರಥಕ್ಕೆ ಹೂವಿನ ಅಲಂಕಾರ, ಪೂಜಾ ಕೈಂಕರ್ಯ ನಂತರ ರಥಕ್ಕೆ ಚಾಲನೆಯನ್ನು ಮಾಜಿ ಸಚಿವರು ಹಾಗೂ ಶಾಸಕರು ಎ. ಮಂಜು, ತಹಸಿಲ್ದಾರ್ ಕೆ.ಸಿ.ಸೌಮ್ಯ ನೀಡಿದರು.
ಪುರೋಹಿತರಾದ ರವಿ, ಮಂಜುನಾಥ್, ಪರಮೇಶ್ , ಭರತ್, ಮಹದೇವ ಮುಂತಾದವರು ಭಾಗವಹಿಸಿದ್ದರು.
ವರದಿ : ಕುಮಾರಸ್ವಾಮಿ
