ರಾಮನಾಥಪುರ, ಜು.13: ದೇಶದ ಬದಲಾವಣೆ ವಿದ್ಯಾಭ್ಯಾಸದಿಂದ ಮಾತ್ರ ಸಾಧ್ಯ. ಆದ್ದರಿಂದ ರೈತರು ತಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರದ ಜೊತೆಗೆ ಗುಣಮಟ್ಟದ ಶಿಕ್ಷಣ ನೀಡಿ ವಿದ್ಯಾವಂತರನ್ನಾಗಿ ರೂಪಿಸಬೇಕು ಎಂದು ಮಾಜಿ ಸಚಿವರು ಹಾಗೂ ಶಾಸಕ ಎ. ಮಂಜು ಕರೆ ನೀಡಿದರು.

ರಾಮನಾಥಪುರದ ಶ್ರೀ ಬಸವೇಶ್ವರ ವೃತ್ತದಲ್ಲಿರುವ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಕ್ರೀಡೆ, ಸಾಂಸ್ಕೃತಿಕ ಹಾಗೂ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸಮಾಜದ ನಿರ್ಮಾಣದಲ್ಲಿ ಪ್ರಮುಖ ಪಾಲುದಾರರಾಗಿದ್ದು, ಉತ್ತಮ ಶಿಕ್ಷಣದ ಮೂಲಕ ಸದೃಢ ಸಮಾಜ ನಿರ್ಮಾಣ ಸಾಧ್ಯ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲೆ ಎಂ.ಎಸ್. ಸರ್ವಮಂಗಳ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ಎಸ್.ಟಿ. ಕೃಷ್ಣೇಗೌಡ, ಉಪಾಧ್ಯಕ್ಷೆ ರೂಪದೇವಿ ಮಹದೇವ್, ಎಂ.ಎಂ. ಸ್ವಾಮಿ, ಸದಸ್ಯರಾದ ಸುಹಾಸ್, ಮೈಕ್ ಮಂಜು, ಜಿ.ಎಸ್. ಭರತ್, ಆರ್.ಎಂ. ಸಿದ್ದಯ್ಯ, ರೂಪಾ ರಮೇಶ್, ಎಂ.ಎನ್. ಕುಮಾರಸ್ವಾಮಿ, ಶಾಸಕರ ಆಪ್ತ ಸಹಾಯಕ ಸುನೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

