ರಾಮನಾಥಪುರ: ಇಲ್ಲಿನ ಶ್ರೀ ವರದಾನ ಬಸವೇಶ್ವರ ದೇವಾಲಯದ ಸಭಾಂಗಣದಲ್ಲಿ 60ನೇ ವರ್ಷದ ಗಣೇಶೋತ್ಸವವನ್ನು ಸೆ.14ರಿಂದ ವೈಭವಪೂರ್ಣವಾಗಿ ಆಚರಿಸಲು ಸಿದ್ಧತೆಗಳು ನಡೆದಿವೆ.
ಗಣೇಶ ಚತುರ್ಥಿಯ ಅಂಗವಾಗಿ ಸೆ.14ರಂದು ಬೆಳಿಗ್ಗೆ 11.30ಕ್ಕೆ ಶ್ರೀ ವಿದ್ಯಾಗಣಪತಿ ಮೂರ್ತಿಯ ಪ್ರತಿಷ್ಠಾಪನಾ ಪೂಜಾ ಕೈಂಕರ್ಯಗಳು ನೆರವೇರಲಿವೆ. ಬಳಿಕ 31 ದಿನಗಳ ಕಾಲ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಪ್ರತಿದಿನ ಸಂಜೆ 7 ಗಂಟೆಗೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ದೇವಾಲಯದ ಆವರಣದಲ್ಲಿ ವಿದ್ಯುತ್ ಅಲಂಕಾರ ಸೇರಿದಂತೆ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಶ್ರೀ ವರದಾನ ಬಸವೇಶ್ವರ ಸಂಘದ ಸದಸ್ಯ ಪ್ರವೀಣ್ ತಿಳಿಸಿದರು.
ಗಣೇಶೋತ್ಸವದ ಉದ್ಘಾಟನೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಶಾಸಕ ಎ. ಮಂಜು ಅವರು ಭಾಗವಹಿಸಲಿದ್ದಾರೆ. 31 ದಿನಗಳ ಕಾಲ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಗಣೇಶೋತ್ಸವವನ್ನು ಯಶಸ್ವಿಗೊಳಿಸಬೇಕು ಎಂದು ಪ್ರವೀಣ್ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಶ್ರೀ ವರದಾನ ಬಸವೇಶ್ವರ ಭಕ್ತ ಬಳಗದ ಸದಸ್ಯರಾದ ನಾಗೇಶ್, ರವಿಸುಂದರ, ಕಾರ್ತಿಕ್, ಸುಬ್ರಹ್ಮಣ್ಯ, ಯೋಗೇಶ್, ರಾಘು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ವರದಿ : ಕುಮಾರಸ್ವಾಮಿ ರಾಮನಾಥಪುರ
