
ಮಹಿಳಾ ಪ್ರೀಮಿಯರ್ ಲೀಗ್ನ 14 ನೇ ಪಂದ್ಯವು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆಯಿತು. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಆರ್ಸಿಬಿ ಸೋಲು ಕಂಡಿದೆ.
ಈ ಋತುವಿನಲ್ಲಿ ಆರ್ಸಿಬಿ ವನಿತೆಯರ ತಂಡ ಸತತ ನಾಲ್ಕನೇ ಪಂದ್ಯವನ್ನು ತವರಿನಲ್ಲಿ ಸೋತಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡ ಆರ್ಸಿಬಿಯನ್ನು 9 ವಿಕೆಟ್ಗಳಿಂದ ಸೋಲಿಸಿ ಪ್ಲೇ ಆಫ್ಗೆ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಇದರೊಂದಿಗೆ ಆರ್ಸಿಬಿ ಪ್ಲೇ ಆಫ್ ಹಾದಿ ಕಠಿಣವಾಗಿದೆ.
ಈ ಪಂದ್ಯದಲ್ಲಿ ಮೊದಲ ಬ್ಯಾಟಿಂಗ್ ಸ್ಮೃತಿ ಮಂದಾನ ನೇತೃತ್ವದ ಆರ್ಸಿಬಿ ತಂಡ ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 147 ರನ್ ಗಳಿಸಿತು. ಆರ್ಸಿಬಿ ನೀಡಿದ ಸುಲಭ ಗುರಿ ಬೆನ್ನಟ್ಟಿದ ಡೆಲ್ಲಿ ಕೇವಲ 16 ಓವರ್ಗಳಲ್ಲಿ 1 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿತು.