ಹಾಸನ:ನಾಡಿನ ಖ್ಯಾತ ಸಾಹಿತಿ, ಸ್ವಾತಂತ್ರ್ಯ ಹೋರಾಟಗಾರ ಹಾಗೂ ಗಾಂಧಿವಾದಿ ಚಿಂತಕರಾದ ಅವರ ಹೆಸರಿನಲ್ಲಿ ಡಾ. ಗೊರೂರು ರಾಮಸ್ವಾಮಿ ಅಯ್ಯಂಗಾರ್ ಸಾಹಿತ್ಯ ಪ್ರತಿಷ್ಠಾನ ಟ್ರಸ್ಟ್ ಅಧಿಕೃತವಾಗಿ ನೋಂದಣಿಯಾಗಿದೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಡಾ. ಗೊರೂರು ಅವರ ಪುತ್ರಿ , ಟ್ರಸ್ಟ್ನ ಮುಖ್ಯ ಉದ್ದೇಶ ಡಾ. ಗೊರೂರರ ಸಾಹಿತ್ಯ, ದೇಶಸೇವೆ, ಗಾಂಧಿ ತತ್ವಗಳು ಹಾಗೂ ಅವರ ಬಹುಮುಖ ಚಿಂತನೆಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದಾಗಿದೆ ಎಂದು ತಿಳಿಸಿದ್ದಾರೆ.
ಇದರ ಅಂಗವಾಗಿ ಸಾಹಿತ್ಯ ವಿಚಾರ ಸಂಕಿರಣಗಳು, ನಾಟಕಗಳು, ಜಾನಪದ ಕಾರ್ಯಕ್ರಮಗಳು ಸೇರಿದಂತೆ ವಿವಿಧ ಸಾಂಸ್ಕೃತಿಕ ಹಾಗೂ ಸಾಹಿತ್ಯಿಕ ಚಟುವಟಿಕೆಗಳನ್ನು ಮುಂದಿನ ದಿನಗಳಲ್ಲಿ ಆಯೋಜಿಸುವ ಯೋಜನೆ ರೂಪಿಸಲಾಗಿದೆ. ಡಾ. ಗೊರೂರು ಅವರ ಆದರ್ಶಗಳು ಮತ್ತು ಸಾಹಿತ್ಯ ಪರಂಪರೆಯನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಪ್ರತಿಷ್ಠಾನ ಕಾರ್ಯನಿರ್ವಹಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
