
ಕಟಕ: ಇಂಗ್ಲೆಂಡ್ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಫಾರ್ಮ್ ಗೆ ಮರಳಿರುವ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಭಾರತದ ಬ್ಯಾಟಿಂಗ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಮತ್ತೊಂದು ವಿಶ್ವದಾಖಲೆಯನ್ನೂ ಹಿಂದಿಕ್ಕಿದ್ದಾರೆ.
ಕಟಕ್ ನ ಬಾರಾಬತಿ ಕ್ರಿಕೆಟ್ ಮೈದಾನದಲ್ಲಿ ನಡೆದ 2ನೇ ಏಕದಿನ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಇಂಗ್ಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದು, ಕೇವಲ 76 ಎಸೆತಗಳಲ್ಲಿ ಶತಕ ಸಿಡಿಸಿದರು. ಒಟ್ಟು 76 ಎಸೆತಗಳಲ್ಲಿ ರೋಹಿತ್ ಶರ್ಮಾ 7 ಸಿಕ್ಸರ್ ಮತ್ತು 9 ಬೌಂಡರಿಗಳ ನೆರವಿನಿಂದ ಶತಕ ಸಾಧನೆ ಮಾಡಿದರು. ಅಂತೆಯೇ ಇದು ರೋಹಿತ್ ಶರ್ಮಾ ಅವರ 32ನೇ ಏಕದಿನ ಶತಕವಾಗಿದೆ.
ಅಂತೆಯೇ ಈ ಶತಕದೊಂದಿಗೆ ರೋಹಿತ್ ಶರ್ಮಾ ಮತ್ತೊಂದು ವಿಶ್ವದಾಖಲೆ ನಿರ್ಮಿಸಿದ್ದು ಮಾತ್ರವಲ್ಲದೇ ಈ ದಾಖಲೆ ಹೊಂದಿದ್ದ ಸಚಿನ್ ತೆಂಡೂಲ್ಕರ್ ದಾಖಲೆಯನ್ನೂ ಹಿಂದಿಕ್ಕಿದ್ದಾರೆ. ಸಚಿನ್ ಮಾತ್ರವಲ್ಲದೇ ರೋಹಿತ್ ಶ್ರೀಲಂಕಾದ ಬ್ಯಾಟಿಂಗ್ ದಂತಕಥೆಗಳಾದ ಸನತ್ ಜಯಸೂರ್ಯ ಹಾಗೂ ತಿಲಕರತ್ನೆ ದಿಲ್ಶಾನ್ ಅವರ ದಾಖಲೆಯನ್ನು ಮುರಿದಿದ್ದಾರೆ.
ಈ ಶತಕದ ಮೂಲಕ ರೋಹಿತ್ ಶರ್ಮಾ ತಮ್ಮ ಏಕದಿನ ಶತಕಗಳ ಸಂಖ್ಯೆಯನ್ನು 32ಕ್ಕೆ ಏರಿಸಿಕೊಂಡಿದ್ದು, ಆ ಮೂಲಕ ಅತೀ ಶತಕ ಸಿಡಿಸಿದ ಆಟಗಾರರ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಈ ಪಟ್ಟಿಯಲ್ಲಿ ಸಚಿನ್ ಅಗ್ರಸ್ಥಾನಿಯಾಗಿದ್ದು, ವಿರಾಟ್ ಕೊಹ್ಲಿ 2ನೇ ಸ್ಥಾನದಲ್ಲಿದ್ದಾರೆ.